Spread the love

ಬೆಂಗಳೂರು: ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ  ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯಡಿಯೂರಪ್ಪ, ಏಕಾಏಕಿ ಕಲ್ಲು ತೂರಾಟದಿಂದ ನನಗೆ ನೋವಾಗಿದೆ ಎಂದಿದ್ದಾರೆ.

ತಾಂಡಾ ಅಭಿವೃದ್ಧಿ ನಿಗಮವನ್ನು ನಾನು ಮಾಡಿದ್ದೇನೆ. ತಪ್ಪು ಗ್ರಹಿಕೆಯಿಂದ ಇಂತಹ ಘಟನೆ ನಡೆದಿದೆ ಅಂತಾ ಭಾವಿಸಿದ್ದೇನೆ. ಬಂಜಾರ ಸಮುದಾಯದ ಹಿರಿಯರನ್ನು ಕರೆದು ಮಾತನಾಡುತ್ತೇನೆ. ನಾನು ಮತ್ತು ವಿಜಯೇಂದ್ರ ಇಬ್ಬರೂ ಬಂಜಾರ ಸಮುದಾಯದ ಸಮಸ್ಯೆಗಳ ಚರ್ಚೆಗೆ ಸಿದ್ಧರಿದ್ದೇವೆ. ಯಾವುದೇ ಕಾರಣಕ್ಕೂ ಸಮಾಜಘಾತುಕ ಶಕ್ತಿಗಳ ಮಾತು ಕೇಳಬೇಡಿ. ನಿಮ್ಮ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ. 4 ಬಾರಿ ಸಿಎಂ ಆಗಲು ಬಂಜಾರ ಸಮುದಾಯದವರು ಸಹಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಅಹಿತಕರ ಘಟನೆಗೆ ಅವಕಾಶ ನಿಡಬೇಡಿ. ಬಂಜಾರ ಸಮುದಾಯದವರು ಶಾಂತ ರೀತಿಯಿಂದ ವರ್ತಿಸಬೇಕು. ನಾಳೆ ಅಥವಾ ನಾಡಿದ್ದು ಶಿವಮೊಗ್ಗಕ್ಕೆ ಹೋಗಿ ಘಟನೆಗೆ ಕಾರಣ ಏನೂ ಚರ್ಚಿಸುತ್ತೇನೆ ಎಂದು ಹೇಳಿದರು.

Leave a Reply

Your email address will not be published. Required fields are marked *