ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಸಂಸದ ಬಿ.ವೈ ರಾಘವೇಂದ್ರ ಅವರ ಎಕ್ಸ್ (ಟ್ವಿಟರ್) ಖಾತೆ ಹ್ಯಾಕ್ ಆಗಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದರಾಗಿರುವ ರಾಘವೇಂದ್ರ ಅವರ ಸಾಮಾಜಿಕ ಜಾಲತಾಣ ಖಾತೆ ಹ್ಯಾಕ್ ಆಗಿದೆ.ಹ್ಯಾಕ್ ಆಗಿರುವ ಕುರಿತು ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಯಾವುದೇ ಅಸಂಬದ್ಧ ಪೋಸ್ಟ್ ಅಥವಾ ಸಂದೇಶ ಬಂದರೆ ನಿರ್ಲಕ್ಷಿಸುವಂತೆ ಮನವಿ ಮಾಡಿದ್ದಾರೆ. ಎಕ್ಸ್ ಖಾತೆಯನ್ನು ಮರಳಿ ಪಡೆಯಲು ಪ್ರಯತ್ನ ಮಾಡಲಾಗುತ್ತಿದೆ ಎಂದು ರಾಘವೇಂದ್ರ ಪೋಸ್ಟ್ ಮಾಡಿದ್ದಾರೆ.