Trending

ಕ್ಲೈಮ್ಯಾಕ್ಸ್ ಹಂತಕ್ಕೆ ಕುರ್ಚಿ ಕಿತ್ತಾಟ ಇದೇ ಶನಿವಾರ ಫೈನಲ್

Spread the love

ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಅಂದ ಮೇಲೆ ನಾವು ಕೇಳಲೇಬೇಕು, ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಅವರು ನನಗೆ ಕರೆ ಮಾಡಲಿ ನೋಡೋಣ ಎಂದು ಹೇಳಿದ್ದಾರೆ.

ರಾಜ್ಯದ ರೈತರ ವಿಶೇಷವಾಗಿ ಉತ್ತರ ಕರ್ನಾಟಕ ರೈತರ ಸಮಸ್ಯೆ ಕುರಿತು ಚರ್ಚಿಸಲು ಇಂದು ಸಿಎಂ ಸಿದ್ದರಾಮಯ್ಯ ತಮ್ಮ ಗೃಹ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ ಪಾಲಿಸುತ್ತೇನೆ ಎಂದು ಪುನರುಚ್ಛರಿಸಿದರು.

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಸಂಘರ್ಷದ ನಡುವೆಯೇ, ಪಕ್ಷದ ಹೈಕಮಾಂಡ್ ಕರೆದರೆ ದೆಹಲಿಗೆ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಇದೇ ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ, ಡಿಸಿಎಂ ಇಬ್ಬರೂ ಸಭೆಗೆ ತೆರಳುವ ಸಾಧ್ಯತೆಯಿದ್ದು, ಇನ್ನೆರಡು ದಿನಗಳಲ್ಲಿ ಸಂಧಾನ ಸೂತ್ರ ಹೊರಬೀಳಲಿದೆ ಎಂದು ಪಕ್ಷದ ಆಪ್ತ ಮೂಲಗಳು ತಿಳಿಸಿವೆ.

[pj-news-ticker]