Trending

ಶಿವಮೊಗ್ಗ: ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ : ಆತ್ಮಹತ್ಯೆಗೆ ಯತ್ನಿಸಿದ ಯುವಕನ ರಕ್ಷಣೆ

Spread the love

ಶಿವಮೊಗ್ಗ: ನಗರದ ಗೋಪಾಳದಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಬಳಿಯ ಚಾನೆಲ್ ಗೆ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ.

ಗುರುವಾರ ಬೆಳಗ್ಗೆ 24 ವರ್ಷದ ಯುವಕ ಚಾನಲ್‌ ಗೆ ಹಾರುತ್ತಿರುವುದನ್ನು ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಮನಿಸಿ ಅಗ್ನಿಶಾಮಕದಳದವರಿಗೆ ಕರೆ ಮಾಡಿದ್ದಾರೆ.

ಅಗ್ನಿಶಾಮಕದಳದ ಡಿಎಫ್ಒ ಅಶೋಕ್ ಕುಮಾರ್ ನೇತೃತ್ವದಲ್ಲಿ ದೋಣಿ ಹಾಗೂ ರಕ್ಷಣಾ ಹಗ್ಗವನ್ನು ಬಳಸಿ ಕಾರ್ಯಾಚರಣೆ ನಡೆಸಿ ಚಾನೆಲ್ ಗೆ ಬಿದ್ದ ಯುವಕನನ್ನ ರಕ್ಷಿಸಲಾಗಿದೆ.

ಯುವಕನನ್ನು ಹಿತೇಶ್ ಎಂದು ಗುರುತಿಸಲಾಗಿದೆ. ಈತ ನಗರದ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, 2023 ರಲ್ಲಿ ಬಿ.ಇ. ಪದವಿ ಪಡೆದಿದ್ದ ಎಂದು ತಿಳಿದು ಬಂದಿದೆ. ಉದ್ಯೋಗ ಸಿಗದೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಮರಳಿದ್ದ ಈತ ಆತ್ಮಹತ್ಯೆಗೆ ಯತ್ನಿಸಲು ಕಾರಣ ಇರಬಹುದು ಎನ್ನಲಾಗಿದೆ.

[pj-news-ticker]