ಹೊಸದಿಲ್ಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ದೇಶಾದ್ಯಂತ ಲೀಟರ್ ಗೆ ತಲಾ 2 ರೂಪಾಯಿ ಕಡಿಮೆ ಮಾಡಲಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಲೋಕಸಭೆ ಚುನಾವಣೆ ವಾರಗಳ ಮೊದಲು ಈ ಘೋಷಣೆ ಮಾಡಲಾಗಿದ್ದು, ಪರಿಷ್ಕೃತ ಬೆಲೆಯು ಮಾರ್ಚ್ 15(ಶುಕ್ರವಾರ) ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರಲಿದೆ.
‘ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು 2 ರೂ. ಇಳಿಸುವ ಮೂಲಕ ದೇಶದ ಪ್ರತಿಷ್ಠಿತ ಪ್ರಧಾನಿ ನರೇಂದ್ರ ಮೋದಿ ಅವರು ಕೋಟ್ಯಂತರ ಭಾರತೀಯರ ಕುಟುಂಬದ ಕಲ್ಯಾಣ ಮತ್ತು ಅನುಕೂಲತೆ ಯಾವಾಗಲೂ ತಮ್ಮ ಗುರಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ,’ ಎಂದು ಸಚಿವರು ಹೇಳಿದ್ದಾರೆ.