Trending

ಶಿವಮೊಗ್ಗ; ಭೀಕರ ಅಪಘಾತದಲ್ಲಿ ಇಬ್ಬರು ಯುವಕರ ಸಾವು,ಓರ್ವ ಗಂಭೀರ

Spread the love

ಶಿವಮೊಗ್ಗ : ತಾಲೂಕಿನ ಆಯನೂರು ಕೋಟೆ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ.

ಮೃತರನ್ನು ಶಿವಮೊಗ್ಗ ತಾಲೂಕಿನ ಹಾರನಹಳ್ಳಿ ಬಳಿಯ ಮಲ್ಲಾಪುರದ ನಿವಾಸಿಗಳಾದ ಅಕಿಫ್ (21) ಮತ್ತು ಚಾಂದ್  ಪೀರ್ (18) ಎಂದು ಗುರುತಿಸಲಾಗಿದೆ. ಇಬ್ಬರೂ ಆಯನೂರಿನಿಂದ ಹಾರನಹಳ್ಳಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಅಪಘಾತದಲ್ಲಿ ಗಾಯಗೊಂಡ ಯುವಕನನ್ನು ಶಿವಮೊಗ್ಗ ತಾಲೂಕಿನ ಕ್ಯಾತಿನಕೆರೆ ಗ್ರಾಮದ ಗುರುಕಿರಣ್ (27) ಎಂದು ಗುರುತಿಸಲಾಗಿದೆ.

ಈತ ಚಾಮೇನಹಳ್ಳಿಯಿಂದ ಆಯನೂರು ಕಡೆಗೆ ಬರುತ್ತಿದ್ದ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ.ವೇಗವಾಗಿ ಬಂದ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ತಕ್ಷಣ ಅಕಿಫ್ ಮತ್ತು ಚಾಂದ್ ಪೀರ್ ರಸ್ತೆಗೆ ಬಿದ್ದಿದ್ದಾರೆ. ಈ ವೇಳೆ, ಹಿಂದಿನಿಂದ ಅತೀ ವೇಗವಾಗಿ ಬಂದ ಯಾವುದೋ ಅಪರಿಚಿತ ವಾಹನವು ರಸ್ತೆಯ ಮೇಲೆ ಬಿದ್ದಿದ್ದ ಈ ಇಬ್ಬರು ಯುವಕರ ಮೇಲೆ ಹರಿದು ಹೋಗಿ ಇಬ್ಬರೂ ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಯುವಕನ ಮೈಮೇಲೆ ವಾಹನದ ಟೈರ್ ಮಾರ್ಕ್‌ಗಳು ಅಚ್ಚಾಗಿ ಬಿದ್ದಿರುವುದು ಈ ಘಟನೆಯ ಭೀಕರತೆಯನ್ನು ತೋರಿಸುತ್ತದೆ. ಮತ್ತೊಂದು ಬೈಕ್‌ನಲ್ಲಿದ್ದ ಗುರುಕಿರಣ್‌ಗೆ ಗಂಭೀರ ಗಾಯಗಳಾಗಿದ್ದು, ತತ್ ಕ್ಷಣವೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

[pj-news-ticker]