Trending

ಕಿಮ್ಮನೆ ಮನವಿಗೆ ಸ್ಪಂದಿಸಿದ ಸರ್ಕಾರ: ಕೋದಂಡರಾಮ ಸ್ವಾಮಿ ದೇವಸ್ಥಾನಕ್ಕೆ 25 ಲಕ್ಷ ಮಂಜೂರು

Spread the love

ತೀರ್ಥಹಳ್ಳಿ : ತಾಲೂಕಿನ ಪುರಾಣ ಪ್ರಸಿದ್ಧ ದೇಗುಲಗಳಲ್ಲಿ ಒಂದಾದ ಶ್ರೀ ಕೋದಂಡರಾಮ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ 25 ಲಕ್ಷ ಹಣ ಮತ್ತು ಸುರಾನಿ ಗಣಪತಿಕಟ್ಟೆಯ ವಿನಾಯಕ ದೇವಸ್ಥಾನ ಹಾಗೂ ಆಗುಂಬೆ ಜಾವಗಲ್ ಗ್ರಾಮದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ತಲಾ 10 ಲಕ್ಷ ಹಣವನ್ನು ಕರ್ನಾಟಕ ರಾಜ್ಯ ಸರ್ಕಾರ ಮಂಜೂರು ಮಾಡಿದೆ.

ದೇವಸ್ಥಾನದ ಜೀರ್ಣೋದ್ದಾರದ ಸಲುವಾಗಿ ವಿಶೇಷ ಕಾಳಜಿ ವಹಿಸಿ ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ದಿನ ಕೋದಂಡರಾಮ ದೇವಸ್ಥಾನದ ಸ್ವಚ್ಛತೆ ಹಾಗೂ ವಿಶೇಷ ಪೂಜೆ ಸಲ್ಲಿಸಿ ಜೀರ್ಣೋದ್ದಾರ ಮಾಡುತ್ತೇವೆ ಎಂದು ಹೇಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಎರಡು ತಿಂಗಳ ಒಳಗಾಗಿ ಹಣ ಮಂಜೂರು ಮಾಡಿಸಿದ್ದಾರೆ.

ಒಟ್ಟಿನಲ್ಲಿ ಕಿಮ್ಮನೆ ರತ್ನಾಕರ್ ನುಡಿದಂತೆ, ಕೊಟ್ಟ ಮಾತಿನಂತೆ ದೇವಸ್ಥಾನಕ್ಕೆ ಹಣ ಮಂಜೂರು ಮಾಡಿಸಿದ್ದು ದೇವಸ್ಥಾನದ ಜೀರ್ಣೋದ್ದಾರ ಆರಂಭವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

[pj-news-ticker]