Trending

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ : ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ

Spread the love

ಶಿವಮೊಗ್ಗ: ಲೋಕಾಯುಕ್ತ ಪೊಲೀಸರು ರಾಜ್ಯಾದ್ಯಂತ ಇಂದು ಬೆಳ್ಳಂಬೆಳಗ್ಗೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಧಾರವಾಡ, ಶಿವಮೊಗ್ಗ ಹಾಗೂ ವಿಜಯನಗರ ಸೇರಿದಂತೆ ವಿವಿಧೆಡೆ ದಾಳಿ ನಡೆಸಿರುವ ಅಧಿಕಾರಿಗಳು, ಪರಿಶೀಲನೆ ನಡೆಸುತ್ತಿದ್ದಾರೆ.

ಜಿಲ್ಲಾ ಪಂಚಾಯತ್ ಶಿವಮೊಗ್ಗದ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಸಹಾಯಕ ಇಂಜಿನಿಯರ್ ಅವರ ಶಿವಮೊಗ್ಗದ ಕಚೇರಿ, ಬೆಂಗಳೂರಿನ ಮನೆಗಳು ಸೇರಿದಂತೆ ಒಟ್ಟು ಐದು ಕಡೆ ಲೋಕಾಯುಕ್ತ ಎಸ್ಪಿ ಮಂಜುನಾಥದ ಚೌಧರಿ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್​ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ರೂಪ್ಲಾ ನಾಯ್ಕ್ ಹಾಗೂ ಸಹಾಯಕ ಎಂಜಿನಿಯರ್ ಶ್ಯಾಮ್ ಅವರ ಮನೆಗಳ‌ ಮೇಲೆ ದಾಳಿ ನಡೆಸಲಾಗಿದೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ದಾಳಿ ನಡೆಸಲಾಗಿದೆ‌. ರೂಪ್ಲಾ ನಾಯ್ಕ್ ಅವರ ಶಿವಮೊಗ್ಗದ ಬಸವನಗುಡಿಯ ಮನೆ, ಡಿಸಿ ಕಾಂಪೌಂಡ್​ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಚೇರಿ, ಚಿಕ್ಕಮಗಳೂರು ಜಿಲ್ಲೆ ಸಖರಾಯ ಪಟ್ಟಣ ಹೋಬಳಿಯ ಹಳ್ಳಿಹಟ್ಟಿ ತಾಂಡದ‌ ಮನೆ, ಬೆಂಗಳೂರಿನ ಕುಂಬಳಗೂಡಿನ ಪನೂರಮನ ಆರ್ ಆರ್ ಡೆಂಟಲ್ ಕಾಲೇಜು ಬಳಿಯ ಪನೂರಮ ಅಪಾರ್ಟ್​ಮೆಂಟ್, ಹಾಗೂ ಸ್ಯಾಟಲೈಟ್ ಏರಿಯಾದ ಮನೆ ಸೇರಿ ಬೆಂಗಳೂರಿನಲ್ಲಿ ಎರಡು ಕಡೆ ದಾಳಿ ನಡೆಸಲಾಗಿದೆ.

ಇನ್ನು ಸಹಾಯಕ ಇಂಜಿನಿಯರ್ ಶ್ಯಾಮ್ ಅವರ ಶಿವಮೊಗ್ಗದ ವಿದ್ಯಾನಗರದ ಮನೆ‌ ಮೇಲೆ ದಾಳಿ ನಡೆಸಲಾಗಿದೆ.

ಒಟ್ಟು ಆರು ಕಡೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ರೂಪ್ಲಾ ನಾಯ್ಕ್ ಅವರು ಬೆಂಗಳೂರಿನ ಮನೆಯಲ್ಲಿದ್ದರು ಎನ್ನಲಾಗಿದೆ. ಬೆಂಗಳೂರಿನಲ್ಲಿ ಎರಡು ಕಡೆ ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ ಅವರು ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಅವರು, ಚಿಕ್ಕಮಗಳೂರಿನಲ್ಲಿ ಚಿಕ್ಕಮಗಳೂರು ಲೋಕಾ ಡಿವೈಎಸ್ಪಿ ತಿರುಮಲೇಶ್ ಅವರು ದಾಳಿ‌ ನಡೆಸಿ, ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿ ಮುಂದುವರೆದಿದ್ದು, ಮಧ್ಯಾಹ್ನದ ವೇಳೆಗೆ ಸಂಪೂರ್ಣ ಚಿತ್ರಣ ದೂರೆಯಲಿದೆ.

[pj-news-ticker]