Trending

ಶಿವಮೊಗ್ಗದಲ್ಲಿ ಹಾಡಹಗಲೇ ಕರ್ತವ್ಯ ನಿರತ ಮಹಿಳಾ ASI ಯಿಂದ ಮಾಂಗಲ್ಯ ಸರ ದೋಚಿದ ಕಳ್ಳರು

Spread the love

ಶಿವಮೊಗ್ಗ :  ಹಾಡಹಗಲೇ ಕರ್ತವ್ಯ ನಿರತ ಮಹಿಳಾ ASI ಅವರ ಮಾಂಗಲ್ಯ ಸರವನ್ನು ಕಳ್ಳರು ದೋಚಿಕೊಂಡು ಹೋಗಿರುವ ಘಟನೆ ನಡೆದಿದೆ. ಈ ಘಟನೆಯಿಂದ ನಗರದ ಜನತೆ ಬೆಚ್ಚಿಬಿದ್ದಿದ್ದಾರೆ.

ASI ಅಮೃತಾಬಾಯಿ ಅವರ ಕತ್ತಿನಲ್ಲಿದ್ದ ಸುಮಾರು 60 ಗ್ರಾಂ ತೂಕದ ಮಾಂಗಲ್ಯ ಸರ ಕಳವು ಆಗಿದೆ. ಶಿವಮೊಗ್ಗದ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುತ್ತಿದ್ದ ಸಂದರ್ಭದಲ್ಲಿ, ಬಂದೋಬಸ್ತ್ ಕರ್ತವ್ಯಕ್ಕೆ ASI ಅಮೃತಾಬಾಯಿ ನಿಯೋಜನೆಗೊಂಡಿದ್ದರು. ಬಿಜೆಪಿ ಕಚೇರಿ ಮುಂದೆ ನಡೆದ ಪ್ರತಿಭಟನೆ ವೇಳೆ ಕಳ್ಳರು ಕೈಚಳಕ ತೋರಿಸಿ ಮಾಂಗಲ್ಯ ಸರವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಘಟನೆಯು ಸಾರ್ವಜನಿಕ ಸ್ಥಳದಲ್ಲಿ, ಪೊಲೀಸ್ ಬಂದೋಬಸ್ತ್ ಇರುವಾಗಲೇ ನಡೆದಿರುವುದರಿಂದ ಪೊಲೀಸ್ ಅಧಿಕಾರಿಗಳನ್ನೇ ಗುರಿಯಾಗಿಸುವ ಧೈರ್ಯಕ್ಕೆ ಕಳ್ಳರು ಇಳಿದಿದ್ದಾರೆ ಎಂಬ ಆತಂಕ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

[pj-news-ticker]