Trending

ಸಾಗರದಲ್ಲಿ ರೈಲಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆಗೆ ಯತ್ನ : ತಲೆಗೆ ಗಂಭೀರ ಗಾಯ

Spread the love

ಶಿವಮೊಗ್ಗ | ಸಾಗರ: ಜಿಲ್ಲೆಯ ಸಾಗರದಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ವ್ಯಕ್ತಿಗೆ ತಲೆಗೆ ಗಂಭೀರ ಗಾಯವಾಗಿರುವುದಾಗಿ ವರದಿಯಾಗಿದೆ.

ಘಟನೆ  ಸಾಗರ ಚಂದ್ರಮಾವಿನ ಕೊಪ್ಪಲು ಸಮೀಪ ನಡೆದಿದೆ. ಅಪರಿಚಿತ ವ್ಯಕ್ತಿಯೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ ವೇಳೆ, ಆತನ ತಲೆಗೆ ಗಂಭೀರ ಸ್ವರೂಪದ ಪೆಟ್ಟು ಬಿದ್ದಿದೆ ಎಂದು ತಿಳಿದುಬಂದಿದೆ.

ಸ್ಥಳೀಯರು ಘಟನೆ ಗಮನಿಸಿ ತಕ್ಷಣವೇ ಆತನನ್ನು ರಕ್ಷಿಸಿ ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

[pj-news-ticker]