ಆನಂದಪುರ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ಶನಿವಾರ ರಾತ್ರಿ ಕಾಸ್ಪಾಡಿ ಬಳಿ ನಡೆದಿದೆ.
ಮಣಿಪಾಲದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಸಾಗರದಿಂದ ಆನಂದಪುರದತ್ತ ಸಾಗುತ್ತಿದ್ದ ಕಾರು ಕಾಸ್ಪಾಡಿ ಬಳಿ ಮುಖಾಮುಖಿಯಾಗಿ ಡಿಕ್ಕಿಯಾಗಿವೆ. ಅಪಘಾತದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸಾಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಕುರಿತು ಸಂಬಂಧಿಸಿದ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ. ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
