Trending

ಶಿವಮೊಗ್ಗ: ವಿದ್ಯಾನಗರ ಫ್ಲೈಓವರ್ ಬಳಿ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

Spread the love

ಶಿವಮೊಗ್ಗ: ನಗರದ ವಿದ್ಯಾನಗರ ಫ್ಲೈಓವರ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಲಾರಿ ಹಿಂಬದಿ ಚಕ್ರಕ್ಕೆ ಬೈಕ್ ಸವಾರ ಸಿಲುಕಿಕೊಂಡ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಚನ್ನಗಿರಿ ಮೂಲದ ರಾಘವೇಂದ್ರ ಎಂದು ಗುರುತಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪೂರ್ವ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ವಿದ್ಯಾನಗರ ಫ್ಲೈಓವರ್ ಬಳಿ ಸಿಗ್ನಲ್ ಲೈಟ್ ಅಳವಡಿಸಬೇಕೆಂದು ನಾಗರಿಕರು ಹಾಗೂ ಕರವೇ ಸ್ವಾಭಿಮಾನಿ ಬಣ ಬಹಳ ಹಿಂದಿನಿಂದಲೇ ಒತ್ತಾಯಿಸುತ್ತಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.

ಇದೇ ವೇಳೆ, ಫ್ಲೈಓವರ್ ಕೆಳಭಾಗದಲ್ಲಿ ನಿರಂತರವಾಗಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ವಾಹನಗಳಿಗೆ ದಂಡ ವಿಧಿಸುತ್ತಿದ್ದು, ಪೊಲೀಸರಿಗೆ ಭಯಪಟ್ಟು ಕೆಲ ವಾಹನ ಸವಾರರು ತಪ್ಪು ದಿಕ್ಕಿನಲ್ಲಿ ವಾಹನ ಚಲಾಯಿಸುತ್ತಿದ್ದಾರೆ. ಇದರಿಂದ ಅಪಘಾತಗಳ ಸಂಭವನೀಯತೆ ಮತ್ತಷ್ಟು ಹೆಚ್ಚಾಗಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚಿತ್ರದುರ್ಗ ರಸ್ತೆ ಮಾರ್ಗ, ಭದ್ರಾವತಿ ಮಾರ್ಗ ಹಾಗೂ ನಗರದ ಒಳಭಾಗಕ್ಕೆ ತೆರಳುವ ವಾಹನಗಳಿಗೆ ಈ ಫ್ಲೈಓವರ್ ಪ್ರಮುಖ ಸಂಚಾರ ಮಾರ್ಗವಾಗಿದ್ದು, ಇಲ್ಲಿ ಸಿಗ್ನಲ್ ಲೈಟ್ ಅಳವಡಿಸುವ ಅಗತ್ಯ ತೀವ್ರವಾಗಿದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಸಿಗ್ನಲ್ ವ್ಯವಸ್ಥೆ ಅಳವಡಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾರರೇ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

[pj-news-ticker]