Breaking
Mon. Oct 14th, 2024

ಕಾಂಗ್ರೆಸ್ ತೆಕ್ಕೆಗೆ ಸದಾನಂದ ಗೌಡ? ಮೈಸೂರಿನಿಂದ ಯದುವೀರ್ ವಿರುದ್ಧ ಡಿವಿಎಸ್ ಕಣಕ್ಕೆ?

By Mooka Nayaka News Mar 18, 2024
Spread the love

ಬೆಂಗಳೂರು: ಮಾಜಿ ಸಿಎಂ, ಹಾಲಿ ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಸಂಸದ ಸದಾನಂದ ಗೌಡ ಬಿಜೆಪಿಯನ್ನು ತೊರೆಯುವ ಸಾಧ್ಯತೆ ದಟ್ಟವಾಗಿದ್ದು, ಮೈಸೂರಿನಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಮೈಸೂರಿನಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರುದ್ಧ ಡಿವಿ ಸದಾನಂದಗೌಡ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್‌ ನಾಯಕರು ಡಿವಿ ಸದಾನಂದಗೌಡ ಜೊತೆ ಮಾತುಕತೆ ನಡೆಸುತ್ತಿದ್ದು, ಒಂದೆರಡು ದಿನದಲ್ಲಿ ಡಿವಿ ಸದಾನಂದಗೌಡರು ತಮ್ಮ ನಿರ್ಧಾರವನ್ನು ಅಧಿಕೃತವಾಗಿ ಘೋಷಣೆ ಮಾಡುವ ನಿರೀಕ್ಷೆ ಇದೆ.

ಸದಾನಂದಗೌಡ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿದ್ದು, ಈ ಹಿಂದೆ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಎನ್‌ಡಿಎ ಅವಧಿಯಲ್ಲಿ ರೈಲ್ವೇ, ಕಾನೂನು ಮತ್ತು ಸಂಸದೀಯ ಇಲಾಖೆ, ಸಾಂಖ್ಯಿಕ ಮತ್ತು ಯೋಜನೆ ಜಾರಿ ಇಲಾಖೆಯ ಕೇಂದ್ರ ಸಚಿವರಾಗಿಯೂ ಡಿವಿ ಸದಾನಂದಗೌಡ ಕಾರ್ಯನಿರ್ವಹಿಸಿದ್ದಾರೆ.

ಕಾಂಗ್ರೆಸ್‌ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದು, ಸಮರ್ಥ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ. ಈ ಹಿನ್ನೆಲೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹಾಗೂ ಮತ್ತಿತರ ನಾಯಕರು ಡಿವಿ ಸದಾನಂದಗೌಡ ಅವರನ್ನು ಸಂಪರ್ಕಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೂ ಮಾರ್ಚ್ 19 ರಂದು ಸದಾನಂದಗೌಡ ಸುದ್ದಿಗೋಷ್ಟಿ ಕರೆದಿದ್ದು, ತಮ್ಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

Related Post