ಶಿವಮೊಗ್ಗ: ಸಿಮ್ಸ್ ಮೆಡಿಕಲ್ ಕಾಲೇಜಿನ ಹಾಸ್ಟೆಲ್ನಲ್ಲಿ ಎಂ.ಡಿ ವ್ಯಾಸಂಗ ಮಾಡುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಸಂದೀಪ್ ರಾಜ್ (27) ಎಂದು ಗುರುತಿಸಲಾಗಿದೆ. ಅವರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ತರಬೇತಿ ವೈದ್ಯನಾಗಿ ಸೇವೆ ಸಲ್ಲಿಸುತ್ತಿದ್ದು, ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂ.ಡಿ (ರೇಡಿಯಾಲಜಿ) ವ್ಯಾಸಂಗ ಮಾಡುತ್ತಿದ್ದರು.
ಇಂದು ಸಿಮ್ಸ್ ಕಾಲೇಜಿನ ಭದ್ರಾ ಹಾಸ್ಟೆಲ್ನ ತಮ್ಮ ಕೊಠಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಮೃತ ಸಂದೀಪ್ ರಾಜ್ ತುಮಕೂರಿನ ಮಧುಗಿರಿ ಮೂಲದವರಾಗಿದ್ದಾರೆ ಎನ್ನಲಾಗಿದೆ.
ಸಂದೀಪ್ ರಾಜ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಈ ಹಿನ್ನೆಲೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
