Trending

‘ನನಗೆ ಮುಸ್ಲಿಂ ಮತಗಳು ಬೇಡ’… ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

Spread the love

ಅಮೇಠಿ: ಉತ್ತರ ಪ್ರದೇಶದ ಹಿರಿಯ ಬಿಜೆಪಿ ನಾಯಕರೊಬ್ಬರು ಮುಸ್ಲಿಂ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆಯೊಂದು ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಜಗದೀಶ್‌ಪುರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಪಾಸಿ ಅವರು, “ನನಗೆ ಮುಸ್ಲಿಂ ಮತಗಳ ಅಗತ್ಯವಿಲ್ಲ ಮತ್ತು ಅವರ ಸುಖ-ದುಃಖಗಳಲ್ಲಿ ನಾನು ಭಾಗಿಯಾಗುವುದಿಲ್ಲ,” ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈರಲ್ ಆಗಿರುವ ವಿಡಿಯೋದಲ್ಲಿ ಸುರೇಶ್ ಪಾಸಿ ಅವರು, “ನಾನು ಎಂದಿಗೂ ಮಸೀದಿಗಳಿಗೆ ಹೋಗುವುದಿಲ್ಲ. ಹಿಂದೆಂದೂ ಹೋಗಿಲ್ಲ, ಮುಂದೆಯೂ ಹೋಗುವುದಿಲ್ಲ. ನಾನು ಅಲ್ಲಿಗೆ ಮತ ಕೇಳಲು ಹೋಗುವುದಿಲ್ಲ ಅಥವಾ ಅವರ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ,” ಎಂದು ಹೇಳಿದ್ದಾರೆ.

ಮುಸ್ಲಿಮರ ಮನೆಗೆ ಹೋಗಿ ಮತ ಯಾಚಿಸದಿರುವ ಬಗ್ಗೆ ತಮಗೆ ಯಾವುದೇ ಗೊಂದಲವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅಂತರ ಕಾಯ್ದುಕೊಂಡ ಬಿಜೆಪಿ:

ಶಾಸಕರ ಈ ವಿವಾದಾತ್ಮಕ ಹೇಳಿಕೆಯಿಂದ ಬಿಜೆಪಿ ಜಿಲ್ಲಾ ಘಟಕ ಅಂತರ ಕಾಯ್ದುಕೊಂಡಿದ್ದು ಈ ಕುರಿತು ಪ್ರತಿಕ್ರಿಯೆ ನೀಡಿದ ಅಮೇಠಿ ಬಿಜೆಪಿ ಜಿಲ್ಲಾಧ್ಯಕ್ಷ ಸುಧಾಂಶು ಶುಕ್ಲ, “ಬಿಜೆಪಿ ‘ಸಬ್ಕಾ ಸಾತ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್’ ತತ್ವದಲ್ಲಿ ಬಿಜೆಪಿ ನಂಬಿಕೆ ಇಟ್ಟಿದೆ. ಇದು ಪಕ್ಷದ ಅಧಿಕೃತ ನಿಲುವು. ಸುರೇಶ್ ಪಾಸಿ ಅವರು ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು ಪಕ್ಷದ್ದಲ್ಲ,” ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನು ಶಾಸಕರ ಹೇಳಿಕೆಯನ್ನು ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ತೀವ್ರವಾಗಿ ಖಂಡಿಸಿವೆ.

[pj-news-ticker]