Trending

ರಿಪ್ಪನ್‌ಪೇಟೆ : ಬಸ್‌ಗೆ ಪಾರ್ಸಲ್ ಹಾಕಲು ರಸ್ತೆ ದಾಟುವಾಗ ಲಾರಿ ಹರಿದು ಯುವಕ ಮೃತ

Spread the love

ಹೊಸನಗರ: ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ.

ಸುಣ್ಣದಬಸ್ತಿ ಗ್ರಾಮದ ನಿವಾಸಿ ನಯಾಜ್ (30) ಮೃತ ಯುವಕ ಎಂದು ಗುರುತಿಸಲಾಗಿದೆ.

ಸುಣ್ಣದಬಸ್ತಿ ಬಸ್ ನಿಲ್ದಾಣದ ಬಳಿ ತೀರ್ಥಹಳ್ಳಿಯಿಂದ ರಿಪ್ಪನ್‌ಪೇಟೆ ಕಡೆಗೆ ಆಗಮಿಸುತ್ತಿದ್ದ ಬಸ್‌ಗೆ ಪಾರ್ಸಲ್ ನೀಡುವ ಉದ್ದೇಶದಿಂದ ನಯಾಜ್ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ, ರಿಪ್ಪನ್‌ಪೇಟೆಯಿಂದ ಕೋಣಂದೂರು ಕಡೆಗೆ ತೆರಳುತ್ತಿದ್ದ ಜಂಬಿಟ್ಟಿಗೆ ಲಾರಿ ಅವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ನಯಾಜ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನೆಯ ಸುದ್ದಿ ತಿಳಿದ ತಕ್ಷಣ ಪಿಎಸ್‌ಐ ರಾಜು ರೆಡ್ಡಿ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತಕ್ಕೆ ಕಾರಣವಾದ ಲಾರಿ ಚಾಲಕನ ವಿರುದ್ಧ ಮುಂದಿನ ಕ್ರಮ ಕೈಗೊಂಡಿದ್ದಾರೆ.

[pj-news-ticker]