ಹೊಸನಗರ: ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಹೋಬಳಿಯ ದೇವಿಕೊಪ್ಪ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮನೆ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಗುರುರಾಜ್ ಬಿನ್ ನಾರಾಯಣ್ ಆಚಾರ್ (45) ಎಂದು ಗುರುತಿಸಲಾಗಿದೆ.
ಕುಟುಂಬಸ್ಥರ ಮಾಹಿತಿ ಪ್ರಕಾರ, ಗುರುರಾಜ್ ಅವರು ಕೆಲಕಾಲದಿಂದ ಸಾಲಬಾಧೆಯಿಂದ ಬಳಲುತ್ತಿದ್ದರು. ಇದರಿಂದ ಮಾನಸಿಕವಾಗಿ ಬೇಸತ್ತ ಅವರು ಮನೆ ಸಮೀಪದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ವಿಷಯ ತಿಳಿದ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ರಿಪ್ಪನ್‌ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮುಂದಿನ ಕಾನೂನು ಕ್ರಮಗಳನ್ನು ಪೊಲೀಸರು ಕೈಗೊಂಡಿದ್ದಾರೆ.
