Trending

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿರುವುದು ಅಕ್ಷಮ್ಯ ಅಪರಾಧ : ಸಿಎಂ ತರಾಟೆ

Spread the love

ಬೆಂಗಳೂರು : ಪೋಲೀಸ್ ಇಲಾಖೆ ಕೆಲವು ಠಾಣೆಗಳಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದು, ಇನ್ನು ಕೆಲವೆಡೆ ಸರಿಯಾಗಿ ಕೆಲಸ ಮಾಡುತ್ತಿಲ್ಲ. ಸುಮಾರು 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲಾಗಿದ್ದಾರೆ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿರುವುದು ಅಕ್ಷಮ್ಯ ಅಪರಾಧ. ರಾಜ್ಯ ಸರ್ಕಾರ ಮಾತ್ರವಲ್ಲದೆ, ಪೋಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವಂಥ ಕೆಲಸವಿದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು.

2003 ರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗುತ್ತಿದೆ. ರಾಯಚೂರು ಜಿಲ್ಲೆಯ ಕವಿತಾಳ, ಪೊಲೀಸ್ ಠಾಣೆ ದೇಶದಲ್ಲಿಯೇ ಉತ್ತಮ ಪೋಲೀಸ್ ಠಾಣೆಗಳ ಸಾಲಿನಲ್ಲಿ ಮೂರನೇ ಸ್ಥಾನ ಪಡೆದಿದೆ ಎಂದರು.

ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕು

ಪೋಲೀಸ್ ಸಬ್ ಇನ್ಸ್ಪೆಕ್ಟರ್, ಎಎಸ್‌ಪಿ, ಡಿವೈಎಸ್‌ಪಿ, ಎಸಿಪಿ ಇವರಿಗೆ ಗೊತ್ತಿಲ್ಲದೆ ಯಾವ ಅಪರಾಧವೂ ನಡೆಯಲು ಸಾಧ್ಯವಿಲ್ಲ. ಪೊಲೀಸರು ಜಾಗರೂಕತೆಯಿಂದ ಕೆಲಸ ಮಾಡಬೇಕೆಂದು ಸ್ಪಷ್ಟವಾಗಿ ಸೂಚಿಸಲಾಗಿದೆ. ವಿಶೇಷವಾಗಿ ದುರ್ಬಲರಿಗೆ ರಕ್ಷಣೆ ನೀಡಬೇಕು. ಬಲಾಢ್ಯರ ಕೈಗೊಂಬೆಗಳಂತೆ ಕೆಲಸ ಮಾಡಬಾರದು ಎಂದು ಸೂಚಿಸಲಾಗಿದೆ ಎಂದರು.

ರಾಜೀವ್ ಗೌಡರನ್ನು ಬಂಧಿಸಲಾಗುವುದು

ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಶಿಡ್ಲಘಟ್ಟದ ಪೌರಾಯುಕ್ತರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮುಖ್ಯಮಂತ್ರಿಗಳು, ಅವರು ತಲೆಮರೆಸಿಕೊಂಡಿದ್ದು, ಅವರನ್ನು ಬಂಧಿಸಲಾಗುವುದು. ಅವರ ಮೇಲೆ ಕಾನೂನಿನ ಪ್ರಕಾರ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಯಾವುದೇ ಪಕ್ಷದವರಾಗಲಿ, ಕಾನೂನಿಗಿಂತ ಯಾರೂ ಮೇಲಲ್ಲ ಎಂದರು.

 

[pj-news-ticker]