ಹೊಸನಗರ: ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಂಜಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಕವಿಗಳ ಸಮ್ಮೇಳನವನ್ನು ಆಯೋಜಿಸಲಾಗಿತ್ತು.
ಈ ಸಮ್ಮೇಳನದಲ್ಲಿ ಭದ್ರಾವತಿ ಬಸವೇಶ್ವರ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಕನ್ನಡ ಭಾಷಾ ಶಿಕ್ಷಕ ಮಂಜನಾಯ್ಕ್ ಬಿ.ಆರ್ ಭಾಗವಹಿಸಿ ತಮ್ಮ ಕವನವನ್ನು ವಾಚನ ಮಾಡಿ ಶ್ರೋತೃಗಳಿಂದ ಮೆಚ್ಚುಗೆಗೆ ಪಾತ್ರರಾದರು.
ರಾಜ್ಯ ಮಟ್ಟದ ವಿವಿಧ ಸಾಹಿತ್ಯಿಕ ಕಾರ್ಯಕ್ರಮಗಳಲ್ಲಿ ಹಿಂದೆಯೂ ಭಾಗವಹಿಸಿ ಕವನ ವಾಚನದ ಮೂಲಕ ಗಮನಸೆಳೆದಿರುವ ಮಂಜನಾಯ್ಕ್ ಅವರ ಈ ಸಾಧನೆಗೆ ಶಿಕ್ಷಣ ಸಂಸ್ಥೆ, ಶಿಕ್ಷಕ ವೃಂದ ಹಾಗೂ ಕನ್ನಡಪರ ಸಂಘಟನೆಗಳು ಅಭಿನಂದನೆ ಸಲ್ಲಿಸಿವೆ.
