Trending

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ನಿರಂತರ ಕೆಮ್ಮು; 14 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

Spread the love

ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅನುದಾನಿತ ವಸತಿ ಶಾಲೆಯಲ್ಲಿರುವ 14 ವಿದ್ಯಾರ್ಥಿಗಳಲ್ಲಿ ಕೆಮ್ಮು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.

ಕಳೆದ ಮೂರು ದಿನಗಳಿಂದ ವಿದ್ಯಾರ್ಥಿಗಳಲ್ಲಿ ಕೆಮ್ಮು ಕಾಣಿಸಿಕೊಂಡಿದ್ದು, ನಿರಂತರ ಕೆಮ್ಮಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

6 ರಿಂದ 10 ತರಗತಿ ವಿದ್ಯಾರ್ಥಿಗಳಲ್ಲಿ ಕೆಮ್ಮು ಕಂಡು ಬಂದಿದೆ. ನಿರಂತರ ಕೆಮ್ಮಿಗೆ ವಸತಿ ಶಾಲೆ ವಾರ್ಡನ್ ಆತಂಕಗೊಂಡಿದ್ದಾರೆ.

ಆಸ್ಪತ್ರೆಗೆ ಜಿಲ್ಲಾಧಿಕಾರಿ, ಜಿ.ಪಂ. ಸಿ.ಇ.ಓ., ಟಿ ಹೆಚ್ ಓ, ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

[pj-news-ticker]