ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ವಿ.ಜಿ.ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಇದೀಗ ಶಾಸಕ ಭೈರತಿ ಬಸವರಾಜ್ನ್ನು ದೇವನಹಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಭೈರತಿ ಬಸವರಾಜ್ ಕೆಲ ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿತ್ತು. ಆದರೆ ಇಂದು ಸಂಜೆ ಅವರು ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಗ್ಗೆ ಸಿಐಡಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಅದರಂತೆ ಸಿಐಡಿಯ ವಿಶೇಷ ತಂಡ ವಿಮಾನ ನಿಲ್ದಾಣಕ್ಕೆ ಲಗ್ಗೆ ಇಟ್ಟಿತ್ತು.
ಅಹಮದಾಬಾದ್ನಿಂದ ಹೊರಟಿದ್ದ ಇಂಡಿಗೋ ವಿಮಾನ (6E683) ಸಂಜೆ 7 ಗಂಟೆಯ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದಂತೆಯೇ ಸ್ಥಳದಲ್ಲಿದ್ದ ಸಿಐಡಿ ಅಧಿಕಾರಿಗಳು, ಬೈರತಿ ಬಸವರಾಜ್ ಅವರನ್ನು ಟರ್ಮಿನಲ್ ಒಳಗಡೆಯೇ ಬಂಧಿಸಿ ವಶಕ್ಕೆ ಪಡೆದಿದ್ದಾರೆ.
ಸದ್ಯ ಪೊಲೀಸರು ಭೈರತಿ ಬಸವರಾಜ್ನನ್ನ ಏರ್ಪೋರ್ಟ್ನಿಂದ ನೇರವಾಗಿ ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಇಂದು ವೈದ್ಯಕೀಯ ಪರೀಕ್ಷೆ ನಡೆಯಲಿದ್ದು, ಬಹುತೇಕ ನಾಳೆ ಜಡ್ಜ್ ಎದುರು ಹಾಜರುಪಡಿಸುವ ಸಾಧ್ಯತೆ ಇದೆ. ಇನ್ನು ಸಿಐಡಿ ಜಡ್ಜ್ ಎದುರು ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಸಲಿದೆ.
