Spread the love

ಶಿವಮೊಗ್ಗ: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ  ನಡುವಲ್ಲೇ ಹಣದ ಹೊಳೆ ಹರಿಯುತ್ತಿದ್ದು, ಜಿಲ್ಲೆಯ ಮೂಲೆ ಮೂಲೆಯಲ್ಲಿ ಅಕ್ರಮ ಹಣ ಹಾಗೂ ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಒಂದೇ ದಿನ ಬರೋಬ್ಬರಿ 4.5 ಕೋಟಿ ಮೌಲ್ಯದ ಸೀರೆ, ನಗದು, ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಶುಕ್ರವಾರ ರಾತ್ರಿ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 4.5 ಕೋಟಿ ಮೌಲ್ಯದ ಸೀರೆ, 1.6 ಕೋಟಿ ನಗದು, 1.56 ಲಕ್ಷ ಮೌಲ್ಯದ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು, ನಿತ್ಯ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 4.5 ಕೋಟಿ ರೂಪಾಯಿ ಮೌಲ್ಯದ ಸೀರೆಗಳು ಹಾಗೂ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1.40 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 20 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು 1.56 ಲಕ್ಷ ಮೌಲ್ಯದ 26 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *