ಸೂರತ್:ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್‌ನ ಸೆಷನ್ಸ್ ನ್ಯಾಯಾಲಯ ಸೋಮವಾರ ಎಪ್ರಿಲ್ 13 ರವರೆಗೆ ಜಾಮೀನು ವಿಸ್ತರಿಸಿದೆ ಮತ್ತು ಮೇ 3 ರಂದು ಶಿಕ್ಷೆಯ ವಿರುದ್ಧದ ಅವರ ಮನವಿಯನ್ನು ಆಲಿಸಲು ಒಪ್ಪಿಕೊಂಡಿದೆ.
ಎ 13 ರಂದು ನಡೆಯುವ ಜಾಮೀನು ವಿಚಾರಣೆಗೆ ರಾಹುಲ್ ಗಾಂಧಿ ಖುದ್ದಾಗಿ ಹಾಜರಾಗುವ ಅಗತ್ಯವಿಲ್ಲ ಎಂದು ರಾಹುಲ್ ಗಾಂಧಿ ಅವರ ವಕೀಲರ ತಂಡದ ವಕೀಲ ರೋಹನ್ ಪನ್ವಾಲಾ ಹೇಳಿದ್ದಾರೆ. ಅವರಿಗೆ ಜಾಮೀನು ಸಿಗುತ್ತದೆ ಎಂಬ ವಿಶ್ವಾಸ ನಮಗಿದೆ. ಸಾಮಾನ್ಯವಾಗಿ ಈ ಪ್ರಕರಣಗಳು ದೀರ್ಘಕಾಲದವರೆಗೆ ನಡೆಯುತ್ತವೆ. ಆದ್ದರಿಂದ, ಜಾಮೀನು ಸಾಮಾನ್ಯವಾಗಿ ನೀಡಲಾಗುತ್ತದೆ ಎಂದು ಪನ್ವಾಲಾ ಹೇಳಿದರು.
ಮ್ಯಾಜಿಸ್ಟ್ರೇಟ್ ತೀರ್ಪನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರ ಕಾನೂನು ತಂಡವು ಸೂರತ್ ಸೆಷನ್ಸ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದು, ಜೊತೆಗೆ ರಾಹುಲ್ ಗಾಂಧಿ ಅವರು ನ್ಯಾಯಾಲಯಕ್ಕೆ ಎರಡು ಅರ್ಜಿಗಳನ್ನು ಸಲ್ಲಿಸಿದ್ದರು. ರಾಹುಲ್ ಗಾಂಧಿ ಅವರು ಹಿರಿಯ ಕಾಂಗ್ರೆಸ್ ನಾಯಕರೊಂದಿಗೆ ಸೂರತ್‌ಗೆ ಆಗಮಿಸಿದ್ದರು. ಕೋರ್ಟ್ ಆದೇಶದ ನಂತರ ರಾಹುಲ್ ಗಾಂಧಿ ಮತ್ತು ಹಲವು ಕಾಂಗ್ರೆಸ್ ನಾಯಕರು ಸೂರತ್‌ನಿಂದ ನಿರ್ಗಮಿಸುತ್ತಿದ್ದಾರೆ.
2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ದೋಷಿ ಮತ್ತು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು.