ಶಿಕಾರಿಪುರ: ರಾಜ್ಯದ ಎಲ್ಲಾ ಕ್ಷೇತ್ರಗಳ ಬಗ್ಗೆ ಎರಡು ದಿನಗಳ ಕಾಲ ಚರ್ಚೆ ನಡೆಸಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ದೆಹಲಿ ಹೋಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಸುತ್ತೇವೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಬೇರೆ ಕ್ಷೇತ್ರದಲ್ಲಿ ನಿಲ್ಲಬೇಕು ಎಂಬ ಒತ್ತಡ ಇತ್ತು. ಆದರೆ ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂದು ಹಿಂದೆಯೇ ಹೇಳಿದ್ದೇನೆ. ವಿಜಯೇಂದ್ರ ಈ ಕ್ಷೇತ್ರದಲ್ಲಿ ಹೆಚ್ಚಿನ ಮತಗಳ ಆಂತರದಿಂದ ಗೆಲವು ಸಾಧಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದ್ದು, ನಾವೇ ಅಧಿಕಾರ ನಡೆಸಲಿದ್ದೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.