Trending

ಶರಾವತಿ ಪಂಪ್ ಸ್ಟೋರೇಜ್‌ ಯೋಜನೆಗೆ ಹೈಕೋರ್ಟ್‌ನಿಂದ ಮಧ್ಯಂತರ ತಡೆಯಾಜ್ಞೆ

Spread the love

ಬೆಂಗಳೂರು : ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೈಗೆತ್ತಿಕೊಳ್ಳಲಿರುವ ಉದ್ದೇಶಿತ 10 ಸಾವಿರ ಕೋಟಿ ರೂ. ವೆಚ್ಚದ ಶರಾವತಿ ಪಂಪ್ ಸ್ಟೋರೇಜ್‌ ಜಲವಿದ್ಯುತ್‌ ಯೋಜನೆಯ ಕಾಮಗಾರಿಯನ್ನು ಅರಣ್ಯ ಪ್ರದೇಶದಲ್ಲಿ ಕೈಗೊಳ್ಳುವುದಕ್ಕೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಸಾಗರದ ಪರಿಸರವಾದಿ ಅಖಿಲೇಶ್‌ ಚಿಪ್ಲಿ, ಉಡುಪಿಯ ಡಾ.ರವೀಂದ್ರನಾಥ ಶಾನಬಾಗ್‌ ಮತ್ತು ಶಿವಮೊಗ್ಗದ ಸಿ.ಬಿ ಮನೋಹರ ಕುಮಾರ್‌ ಸಲ್ಲಿಸಿರುವ ಅರ್ಜಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತು.

ಕೇಂದ್ರ ಸರಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಕೆ.ಅರವಿಂದ ಕಾಮತ್‌, ”ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿಯಿಂದ ಅನುಮೋದನೆ ಇನ್ನೂ ಸಿಕ್ಕಿಲ್ಲ. ಯೋಜನೆ ಬಗೆಗಿನ ಆತಂಕಗಳ ಪರಿಶೀಲನೆ ಮಾಡಲಾಗುತ್ತಿದೆ’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ರಾಜ್ಯ ಸರಕಾರದ ಪರ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ ಯಾವುದೇ ಮಧ್ಯಂತರ ತಡೆ ನೀಡದಂತೆ ಮನವಿ ಮಾಡಿದರು. ಆದರೆ, ಯೋಜನೆಯಿಂದಾಗುವ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ನ್ಯಾಯಾಲಯ, ಅರಣ್ಯ ಪ್ರದೇಶದಲ್ಲಿ ಯಾವುದೇ ಕಾಮಗಾರಿ ಕೈಗೊಳ್ಳಬಾರದು ಎಂದು ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಜೂ. 10ಕ್ಕೆ ಮುಂದೂಡಿತು.

[pj-news-ticker]