Trending

ರಿಪ್ಪನ್‌ಪೇಟೆಯಲ್ಲಿ ಜೇನುನೊಣಗಳ ದಾಳಿ : ಶಾಲಾ ಮಕ್ಕಳು ಸೇರಿ ನಾಲ್ವರಿಗೆ ಗಾಯ

Spread the love

ರಿಪ್ಪನ್‌ಪೇಟೆ : ಜೇನುನೊಣಗಳ ಏಕಾಏಕಿ ದಾಳಿ ನಡೆದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ ನಾಲ್ವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಗ್ರಾಮದ ಮುಖ್ಯರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಜೇನುನೊಣಗಳು ದಾಳಿ ನಡೆಸಿ ಆತಂಕ ಸೃಷ್ಟಿಸಿವೆ.

ಈ ವೇಳೆ ಬ್ಯಾಂಕ್‌ ನೌಕರ ತೌಸಿಫ್ ಅವರ ಮೇಲೆ ಜೇನುನೊಣಗಳು ಹೆಚ್ಚು ಪ್ರಮಾಣದಲ್ಲಿ ದಾಳಿ ನಡೆಸಿದ್ದು, ಅವರ ಮುಖಕ್ಕೆ 20ಕ್ಕೂ ಹೆಚ್ಚು ಬಾರಿ ಕಚ್ಚಿವೆ ಎಂದು ತಿಳಿದುಬಂದಿದೆ. ಜೊತೆಗೆ, ಶಾಲಾ ಮಕ್ಕಳ ಮೇಲೂ ದಾಳಿ ನಡೆದಿದ್ದು, ಅವರು ಭಯದಿಂದ ಓಡಿ ಪಾರಾಗಲು ಯತ್ನಿಸಿದರೂ ಸ್ವಲ್ಪ ಪ್ರಮಾಣದಲ್ಲಿ ಕಚ್ಚಿಸಿಕೊಂಡಿದ್ದಾರೆ.

ಗಾಯಗೊಂಡ ಎಲ್ಲರನ್ನೂ ತಕ್ಷಣ ರಿಪ್ಪನ್‌ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಕೆಲ ಕಾಲ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

[pj-news-ticker]