Breaking
Sat. Apr 20th, 2024

ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

By Mooka Nayaka News Mar 26, 2024
Spread the love

ಕೊಪ್ಪಳ : ಕಾರ್ಯಕ್ರಮವೊಂದರಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ವಿರುದ್ಧ ಹೇಳಿಕೆ ನೀಡಿದ ವಿರುದ್ಧ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗ್ಯಾನನಗೌಡ ಎಂಬುವವರು ತಂಗಡಗಿ ವಿರುದ್ಧ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಸಚಿವ ಶಿವರಾಜ್ ತಂಗಡಗಿ ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದು ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದರು.

Related Post