ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ಮತ್ತೊಂದು ಬಲಿಯಾಗಿದೆ. ಮಂಗನ ಕಾಯಿಲೆಯಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬಿಂತ್ರವಳ್ಳಿ ಗ್ರಾಮದ ರತ್ನ (68) ಎಂಬುವರಿಗೆ ಮಂಗನಕಾಯಿಲೆ ತಗುಲಿತ್ತು. ಪರೀಕ್ಷೆಯಲ್ಲಿ ದೃಢಪಟ್ಟ ನಂತರ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆ ರತ್ನ ಎಂಬುವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ ಮೂಲಕ ಚಿಕ್ಕಮಗಳೂರಿನಲ್ಲಿ ಮಂಗನಕಾಯಿಲೆಗೆ ಮತ್ತೊಂದು ಬಲಿಯನ್ನು ಪಡೆದಂತೆ ಆಗಿದೆ.