Trending

ಎಸ್​​ಎಸ್​​ಎಲ್​ಸಿ ತೃತೀಯ ಭಾಷೆ ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ : ಮಾರ್ಚ್‌ 30ರ ಬದಲು ಹೊಸ ದಿನಾಂಕ ನಿಗದಿ

Spread the love

ಬೆಂಗಳೂರು : ಕರ್ನಾಟಕದಾದ್ಯಂತ ಮಾರ್ಚ್​ 18ರಂದು ಎಸ್​​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಿದೆ. ಈಗಾಗಲೇ 3 ಪರೀಕ್ಷೆ ಯಶಸ್ವಿಯಾಗಿ ನಡೆದಿವೆ. ಇದೀಗ ಮಾರ್ಚ್‌ 30ರಂದು ನಡೆಯಬೇಕಿದ್ದ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಮಹಾವೀರ ಜಯಂತಿ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದ್ದು, ಅದರ ಬದಲು ಮಾರ್ಚ್‌ 31ರಂದು ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

2025 ನವೆಂಬರ್​​ 4ರಂದು ಪ್ರಕಟಿಸಿದ 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯಲ್ಲಿ ತೃತೀಯ ಭಾಷೆ ಹಿಂದಿ ಪರೀಕ್ಷೆಯನ್ನು ಮಾರ್ಚ್​ 30ರಂದು ನಿಗದಿಪಡಿಸಲಾಗಿತ್ತು. ಇದೀಗ ಈ ಪರೀಕ್ಷೆಯ ದಿನಾಂಕ ಬದಲಾಗಿದ್ದು, ಉಳಿದೆಲ್ಲ ಪರೀಕ್ಷೆಗಳು ಯಥಾಪ್ರಕಾರ ನಡೆಯಲಿದೆ.

[pj-news-ticker]