Trending

ಶಿವಮೊಗ್ಗ: ಸಹ್ಯಾದ್ರಿ ಕ್ರಿಕೆಟ್ ಅಕಾಡಮಿ ವತಿಯಿಂದ ಬೇಸಿಗೆ ಕ್ರಿಕೆಟ್ ಶಿಬಿರ – ಯುವ ಪ್ರತಿಭೆಗಳಿಗೆ ಸುವರ್ಣಾವಕಾಶ

Spread the love

ಶಿವಮೊಗ್ಗ : ಸಹ್ಯಾದ್ರಿ ಕ್ರಿಕೆಟ್ ಅಕಾಡಮಿ ವತಿಯಿಂದ 12ನೇ ವರ್ಷದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಏಪ್ರಿಲ್ 1ರಿಂದ ಪ್ರಾರಂಭವಾಗುವ ಈ ಶಿಬಿರವು ಒಂದು ತಿಂಗಳ ಕಾಲ ನಡೆಯಲಿದ್ದು, ಅನುಭವಿ ತರಬೇತುದಾರರಾದ ಪಿ.ವಿ. ನಾಗರಾಜ್ ಅವರ ನೇತೃತ್ವದಲ್ಲಿ ಹಾಗೂ ಹಿರಿಯ ಕ್ರೀಡಾಪಟುಗಳ ಮಾರ್ಗದರ್ಶನದಲ್ಲಿ ತರಬೇತಿ ನೀಡಲಾಗುತ್ತದೆ.

10ರಿಂದ 19 ವರ್ಷದೊಳಗಿನ ಬಾಲಕರು ಹಾಗೂ ಬಾಲಕಿಯರಿಗೆ ಈ ಶಿಬಿರವನ್ನು ಆಯೋಜಿಸಲಾಗಿದ್ದು, ಕ್ರಿಕೆಟ್ ಕ್ಷೇತ್ರದಲ್ಲಿ ಮುಂದುವರಿಯಲು ಬಯಸುವ ಯುವ ಪ್ರತಿಭೆಗಳಿಗೆ ಇದು ಉತ್ತಮ ಅವಕಾಶವಾಗಿದೆ.

ಅಕಾಡಮಿಯಲ್ಲಿ ತರಬೇತಿ ಪಡೆದ ಅನೇಕ ಆಟಗಾರರು ಜಿಲ್ಲೆ, ವಿಭಾಗ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸ್ಪರ್ಧೆಗಳಲ್ಲದೆ ಅಂತರ ವಿಶ್ವವಿದ್ಯಾಲಯ ಮತ್ತು ಕೆಎಸ್‌ಸಿಎ ಲೀಗ್ ತಂಡಗಳಲ್ಲಿ ಭಾಗವಹಿಸುತ್ತಿರುವುದು ಗಮನಾರ್ಹ ಸಾಧನೆಯಾಗಿದೆ.

ಶಿಬಿರದ ಅವಧಿಯಲ್ಲಿ ಪ್ರತಿಭಾವಂತ ಆಟಗಾರರನ್ನು ಗುರುತಿಸಿ, ವರ್ಷಪೂರ್ತಿ ನಡೆಯುವ ವಿಶೇಷ ತರಬೇತಿ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಆಸಕ್ತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪಿ.ವಿ. ನಾಗರಾಜ್ (ಮೊಬೈಲ್: 9964599936) ಅವರನ್ನು ಸಂಪರ್ಕಿಸಬಹುದು. ಹಾಗೆಯೇ ಪ್ರತಿದಿನ ಬೆಳಿಗ್ಗೆ 6.30ರಿಂದ 8.30ರವರೆಗೆ ಹಾಗೂ ಸಂಜೆ 4.30ರಿಂದ 6.30ರವರೆಗೆ ಸಹ್ಯಾದ್ರಿ ಕ್ರಿಕೆಟ್ ಅಕಾಡಮಿ, ಸಹ್ಯಾದ್ರಿ ಕಾಲೇಜ್ ಕ್ರೀಡಾಂಗಣದಲ್ಲಿ ಸಂಪರ್ಕಿಸಲು ಸೂಚಿಸಲಾಗಿದೆ.

[pj-news-ticker]