Trending

ಬಿಜೆಪಿ ಸೇರಿದ ಟೆನಿಸ್‌ ದಿಗ್ಗಜ ಲಿಯಾಂಡರ್ ಪೇಸ್

Spread the love

ನವದೆಹಲಿ : ಕಳೆದ ಕೆಲ ವರ್ಷಗಳಲ್ಲಿ ಹಲವಾರು ಪ್ರಮುಖ ಕ್ರೀಡಾಪಟುಗಳು ತಮ್ಮ ಕ್ರೀಡಾ ವೃತ್ತಿಜೀವನದ ನಂತರ ರಾಜಕೀಯಕ್ಕೆ ಸೇರುವ ಪ್ರವೃತ್ತಿಯನ್ನು ಅನುಸರಿಸಿದ್ದಾರೆ. ಇದೀಗ ಟೆನಿಸ್ ದಂತಕಥೆ ಲಿಯಾಂಡರ್ ಪೇಸ್ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನವೇ ಪೇಸ್, ಬಿಜೆಪಿ ಸೇರಿಕೊಂಡಿರುವುದು ಪಕ್ಷಕ್ಕೆ ಹೆಚ್ಚಿನ ಬಲ ಸಿಕ್ಕಂತಾಗಿದೆ.

ಇತ್ತೀಚೆಗೆ ಲಿಯಾಂಡರ್ ಪೇಸ್ ಅವರು ಕೋಲ್ಕತ್ತದಲ್ಲಿ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್ ಅವರನ್ನು ಭೇಟಿಯಾಗಿದ್ದರು. ಆ ಬಳಿಕ ಅವರು ಬಿಜೆಪಿ ಸೇರಬಹುದು ಎಂದು ರಾಜಕೀಯ ವಲಯದಲ್ಲಿ ಚರ್ಚೆ ಆರಂಭವಾಗಿತ್ತು.

ಲಿಯಾಂಡರ್ ಪೇಸ್ 2021ರಲ್ಲಿ ಟಿಎಂಸಿ ಸೇರ್ಪಡೆಯಾಗಿದ್ದರು. 2022ರ ಗೋವಾ ಚುನಾವಣೆಯ ವೇಳೆ ಪಕ್ಷದ ಪರ ಪ್ರಚಾರ ಮಾಡಿದ್ದರು. ಆದರೆ, ಇದುವರೆಗೂ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ ಏ.23 ಹಾಗೂ ಏ.29ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಮೇ.4ರಂದು ಮತ ಎಣಿಕೆ ಪ್ರಕ್ರಿಯೆ ಜರುಗಲಿದೆ.

ಬ್ಯಾಡ್ಮಿಂಟನ್ ದಂತಕಥೆ ಸೈನಾ ನೆಹ್ವಾಲ್ 2020 ರ ಜನವರಿಯಲ್ಲಿ ಬಿಜೆಪಿ ಪಕ್ಷವನ್ನು ಸೇರಿದರು. ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್, ಮಾಜಿ ಕುಸ್ತಿಪಟು ಯೋಗೇಶ್ವರ್ ದತ್, ಬಬಿತಾ ಫೋಗಟ್ ಮತ್ತು ಮಾಜಿ ಫುಟ್ಬಾಲ್ ಆಟಗಾರ್ತಿ ಕಲ್ಯಾಣ್ ಚೌಬೆ ಈಗಾಗಲೇ ಬಿಜೆಪಿ ಸೇರಿದ್ದಾರೆ.

[pj-news-ticker]