Trending

ಶಿರಸಿ : ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ – 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Spread the love

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಖಾಸಗಿ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಕೊಳಗಿಬೀಸ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ.

ಎರಡು ಬಸ್ಸುಗಳ ಮುಖಾಮುಖಿ ಡಿಕ್ಕಿಯಿಂದಾಗಿ ಬಸ್ ಮುಂಭಾಗವು ಸಂಪೂರ್ಣವಾಗಿ ಜಖಂ ಆಗಿದೆ. ಅಪಘಾತದಿಂದಾಗಿ 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಶಿರಸಿಯ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.

[pj-news-ticker]