Trending

ಸಂವಿಧಾನ ಬದುಕಿನ ದಿಕ್ಕು ತೋರಿಸುವ ದೀಪ : ಬಿ.ಕೆ. ಸಂಗಮೇಶ್ವರ್

Spread the love

ಭದ್ರಾವತಿ: ಸಂವಿಧಾನದ ಆಶಯಗಳು ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಕೆಯಾಗಬೇಕು, ಸಂವಿಧಾನ ಬದುಕಿನ ದಿಕ್ಕು ತೋರಿಸುವ ದೀಪ ಎಂದು ಶಾಸಕ ಹಾಗೂ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ. ಸಂಗಮೇಶ್ವರ್ ಹೇಳಿದರು.

ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಮತ್ತು ಸಮಜ ಕಲ್ಯಾಣ ಇಲಾಖೆ ಹಾಗು ದಲಿತ ಸಂಘಟನೆಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್ ಅಂಬೇಡ್ಕರ್‌ರವರ ೧೩೫ನೇ ಜಯಂತಿ ಕಾರ್ಯಕ್ರಮ ಹಾಗು ನೂತನವಾಗಿ ಸುಮಾರು ೪.೬೨ ಕೋ. ರು. ವೆಚ್ಚದಲ್ಲಿ ನಗರದ ಹೃದಯ ಭಾಗ ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಮೀಪ ನಿರ್ಮಿಸಲಾಗಿರುವ ಡಾ. ಬಿ.ಆರ್ ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನದ ಮೌಲ್ಯಗಳನ್ನು ಪಾಲಿಸುವುದರ ಮೂಲಕ ಸಮಾನತೆ ಮತ್ತು ನ್ಯಾಯವನ್ನು ಕಾಪಾಡಬೇಕು, ಅವರು ರೂಪಿಸಿಕೊಟ್ಟಿರುವ ಸಂವಿಧಾನದ ಆಶಯದಂತೆ ನಾವೆಲ್ಲರೂ ಬದುಕಿದಾಗ ಮಾತ್ರ ಅವರ ಜನ್ಮದಿನ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ರಾಥೋಡ್ ಉಪನ್ಯಾಸ ನೀಡಿ, ಅಂಬೇಡ್ಕರ್ ಅವರ ಜೀವನ ಹೋರಾಟ ಮತ್ತು ಸಾಧನೆಗಳನ್ನು ವಿವರಿಸಿದರು. ಸಮಾಜದಲ್ಲಿ ಸಮಾನತೆ ಮತ್ತು ಹಕ್ಕುಗಳ ಸ್ಥಾಪನೆಗೆ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಮಾತನಾಡಿ, ಸಂವಿಧಾನದ ಮೌಲ್ಯಗಳನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.ವೇದಿಕೆಯಲ್ಲಿ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜಕುಮಾರ್, ಉಪಾಧ್ಯಕ್ಷ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯಕ್ಷೆ ಪ್ರೇಮ ಬದರಿನಾರಾಯಣ, ಪೌರಾಯುಕ್ತ ಕೆ.ಎನ್ ಹೇಮಂತ್, ತಹಸೀಲ್ದಾರ್ ಪರುಸಪ್ಪ ಕುರುಬರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಆಶಾಲತ,

ಎಂಎಲ್‌ಸಿ ಬಲ್ಕೀಸ್ ಬಾನು,ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಎಸ್ ಗಣೇಶ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಹಿರಿಯ ಸದಸ್ಯ ಬಿ.ಕೆ ಮೋಹನ್ ಸೇರಿದಂತೆ ದಲಿತ ಸಂಘಟನೆಗಳ ಮುಖಂಡರು, ಮಹಿಳಾ ಸಂಘಟನೆಗಳ ಪ್ರಮುಖರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

[pj-news-ticker]