Trending

ಕರ್ನಾಟಕದ ಜನತೆಗೆ ವಿದ್ಯುತ್ ದರ ಏರಿಕೆ ಶಾಕ್ : ಎಷ್ಟು? ಎಂದಿನಿಂದ ಜಾರಿ? ಇಲ್ಲಿದೆ ವಿವರ

Spread the love

ಬೆಂಗಳೂರು : ಕರ್ನಾಟಕದ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ವಿದ್ಯುತ್ ದರವನ್ನು ಹೆಚ್ಚಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು  ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ.

ಒಂದು ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಲಾಗಿದೆ. ಆ ಮೂಲಕ ರಾಜ್ಯದ ಜನರಿಗೆ ಕರೆಂಟ್​ ಶಾಕ್​ ನೀಡಲಾಗಿದೆ.

ದರ ಏರಿಕೆಗೆ ಕಾರಣವೇನು?

ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳು (ಎಸ್ಕಾಂಗಳು) ನಷ್ಟದ ಭೀತಿಯಿಂದ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. 2024-25ರ ಆರ್ಥಿಕ ವರ್ಷದಲ್ಲಿ ವಿದ್ಯುತ್ ಮಾರಾಟದಿಂದ ಆಯೋಗವು ಸುಮಾರು 34,084 ಕೋಟಿ ರೂಪಾಯಿ ಆದಾಯದ ನಿರೀಕ್ಷೆ ಇಟ್ಟುಕೊಂಡಿತ್ತು. ಆದರೆ ವಾಸ್ತವದಲ್ಲಿ 32,019 ಕೋಟಿ ರೂಪಾಯಿ ಮಾತ್ರ ಸಂಗ್ರಹವಾಗಿದ್ದು, ಸುಮಾರು 2,068 ಕೋಟಿ ರೂಪಾಯಿಗಳಷ್ಟು ಬೃಹತ್ ಆದಾಯದ ಕೊರತೆಯುಂಟಾಗಿದೆ. ಈ ಆರ್ಥಿಕ ಕೊರತೆಯನ್ನು ಸರಿದೂಗಿಸಲು ಗ್ರಾಹಕರಿಂದಲೇ ಹಣ ಸಂಗ್ರಹಿಸಲು ಆಯೋಗವು ಅನುಮತಿ ನೀಡಿದೆ.

ನೂತನ ದರ ಯಾವಾಗ ಅನ್ವಯ?

ಈ ನೂತನ ದರ ಏರಿಕೆಯೂ ಇದೇ ಮೇ ತಿಂಗಳಿನಿಂದ ಜಾರಿಗೆ ಬರಲಿದೆ. ಅಂದರೆ ಗ್ರಾಹಕರು ಮೇ ತಿಂಗಳಲ್ಲಿ ಪಡೆಯುವ ಬಿಲ್‌ನಲ್ಲಿ ಪ್ರತಿ ಯೂನಿಟ್‌ಗೆ 56 ಪೈಸೆಯಷ್ಟು ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗುತ್ತದೆ.

[pj-news-ticker]