Trending

SSLC ಪರೀಕ್ಷೆ ಪಾಸ್​ ಆದ ಖುಷಿಯಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು

Spread the love

ಕೋಲಾರ : ಈಜಲು ಹೋಗಿ ನೀರುಪಾಲಾಗುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಲೇ ಇದ್ದು, ತಲಕಾಡು ಬಳಿ ಮೊನ್ನೆ ಮೊನ್ನೆಯಷ್ಟೇ ವಿದ್ಯಾರ್ಥಿನಿಯರು ನೀರುಪಾಲಾದ ಘಟನೆ ಮಾಸುವ ಮುನ್ನವೇ ಇತ್ತ ಕೋಲಾರದಲ್ಲಿಯೂ SSLC ಪರೀಕ್ಷೆ ಪಾಸ್​ ಆದ ಖುಷಿಯಲ್ಲಿದ್ದ ಬಾಲಕನೋರ್ವ ಈಜಲು ಹೋಗಿ ಜಲಸಮಾಧಿಯಾಗಿರುವ ಘಟನೆ ನಡೆದಿದೆ.

ಕಿರಣ್(15) ಮೃತ ಬಾಲಕನಾಗಿದ್ದು, ಎಸ್​​ಎಸ್​​ಎಲ್​​ಸಿ ಫಲಿತಾಂಶ ಬಂದ ಬಳಿಕ ಸ್ನೇಹಿತರ ಜೊತೆ ಈತ ಈಜಲು ತೆರಳಿದ್ದ ವೇಳೆ ಬಾವಿಯ ನೀರಲ್ಲಿ ಮುಳುಗಿ ಅವಘಡ ನಡೆದಿದೆ ಎನ್ನಲಾಗಿದೆ.

ರಘುಪತಿ ಎಂಬವರ ಪುತ್ರನಾದ ಕಿರಣ್​​, ಇಂದು ಎಸ್​​ಎಸ್​ಎಲ್​​ಸಿ ಫಲಿತಾಂಶ ಬಂದ ಖುಷಿಯಲ್ಲಿದ್ದ. 625ಕ್ಕೆ 239 ಅಂಕಗಳನ್ನು ಪಡೆದು ತೇರ್ಗಡೆ ಹೊಂದಿದ್ದ ಈತ ಪರೀಕ್ಷೆ ಪಾಸಾದೆ ಎಂದು ಸಂತಸಪಟ್ಟಿದ್ದ. ಆದರೆ ಈಜಲು ತೆರಳಿದ್ದ ಕಿರಣ್​​ ಸ್ಮಿಮ್ಮಿಂಗ್​​ ಬಾರದ ಕಾರಣ ಬಾವಿಯ ನೀರಲ್ಲಿ ಮುಳುಗಿದ್ದಾನೆ.

ಘಟನೆ ಬೆನ್ನಲ್ಲೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕಿರಣ್ ಶವಕ್ಕಾಗಿ ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಹುಡುಕಾಟ ನಡೆಯುತ್ತಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ರಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

[pj-news-ticker]