Trending

ಆನಂದಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ; ಐವರು ಪ್ರಾಣಾಪಾಯದಿಂದ ಪಾರು

Spread the love

ಆನಂದಪುರ: ಸಾಗರದಿಂದ ಆನಂದಪುರ ಕಡೆಗೆ ಅಡಿಕೆ ಸಸಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಾಗರ ತಾಲೂಕಿನ ಕಾಸ್ಪಾಡಿ ಎಂಬಲ್ಲಿಂದ ಅಡಿಕೆ ಸಸಿಗಳನ್ನು ಲೋಡ್ ಮಾಡಿಕೊಂಡು ಬರುತ್ತಿದ್ದ ಲಾರಿಯು ಐಗಿನ ಬಯಲು ಕ್ರಾಸ್ ಬಳಿ ತಲುಪಿದಾಗ ಚಾಲಕನ ಹತೋಟಿ ತಪ್ಪಿ ರಸ್ತೆಯಲ್ಲೇ ಉರುಳಿ ಬಿದ್ದಿದೆ.

ಅಪಘಾತದ ರಭಸಕ್ಕೆ ಲಾರಿ ಸಂಪೂರ್ಣ ಪಲ್ಟಿಯಾಗಿದ್ದು, ಚಾಲಕ ಸೇರಿದಂತೆ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕೂಡಲೇ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಲಾರಿಯಿಂದ ಹೊರತೆಗೆದು ಪ್ರಾಥಮಿಕ ಚಿಕಿತ್ಸೆಗೆ ಸಹಕರಿಸಿದರು.

ಸ್ಥಳಕ್ಕೆ ಶಾಸಕರ ಭೇಟಿ
ಇದೇ ಮಾರ್ಗವಾಗಿ ಸಂಚರಿಸುತ್ತಿದ್ದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಅಪಘಾತ ನಡೆದ ಸ್ಥಳದಲ್ಲಿ ವಾಹನ ನಿಲ್ಲಿಸಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಅಪಘಾತದ ತೀವ್ರತೆಯನ್ನು ಕಂಡು ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ, ಸ್ಥಳಕ್ಕೆ ಬರುವಂತೆ ಸೂಚಿಸಿ ಮುಂದಕ್ಕೆ ತೆರಳಿದರು.

[pj-news-ticker]