Trending

ಕಾಂಗ್ರೆಸ್ ಶಾಸಕ ಟಿಡಿ ರಾಜೇಗೌಡಗೆ ಮತ್ತೆ ಶಾಕ್ : ಶೃಂಗೇರಿ ಚುನಾವಣೆ ಅಂಚೆ ಮತ ಮರುಎಣಿಕೆಗೆ ಹೈಕೋರ್ಟ್ ಆದೇಶ

Spread the love

ಬೆಂಗಳೂರು : ಚಿಕ್ಕಮಗಳೂರು  ಜಿಲ್ಲೆಯ ಶೃಂಗೇರಿ  ಶಾಸಕ ಟಿಡಿ ರಾಜೇಗೌಡಗೆ ಹೈಕೋರ್ಟ್  ಬಿಗ್ ಶಾಕ್ ನೀಡಿದೆ. ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಗೆ ಹೈಕೋರ್ಟ್ ಸೂಚನೆ ನೀಡಿದ್ದು, ಮೇ 2ರಂದು ಬೆಳಿಗ್ಗೆ 9 ಗಂಟೆಗೆ ಅಂಚೆ ಮತ ಮರು ಎಣಿಕೆ ನಡೆಯಲಿದೆ. ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನಲ್ಲಿ ಮರು ಮತ ಎಣಿಕೆ ನಡೆಯಲಿದೆ.

ಚುನಾವಣೆಯಲ್ಲಿ ಅಲ್ಪ ಅಂತರದಿಂದ ಪರಾಜಿತಗೊಂಡಿದ್ದ ಬಿಜೆಪಿ ಅಭ್ಯರ್ಥಿ ಡಿಎನ್ ಜೀವರಾಜ್ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ಕರ್ನಾಟಕ ಹೈಕೋರ್ಟ್, ಅಂಚೆ ಮತಗಳನ್ನು ಮರು ಎಣಿಕೆ ಮಾಡುವಂತೆ ಮಹತ್ವದ ಆದೇಶ ಹೊರಡಿಸಿದೆ. ಏಪ್ರಿಲ್ 6 ರಂದೇ ಮರು ಎಣಿಕೆಗೆ ಆದೇಶ ನೀಡಿದ್ದ ಹೈಕೋರ್ಟ್, ಬಳಿಕ ಇದಕ್ಕೆ ಮಧ್ಯಂತರ ತಡೆ ನೀಡಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಹೈಕೋರ್ಟ್ ಮಧ್ಯಂತರ ತಡೆ ನೀಡಿತ್ತು.

ಎರಡು ವಾರಗಳ ಕಾಲಾವಕಾಶ ನೀಡಿ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ಇದೀಗ ಅಂಚೆ ಮತಗಳ ಮರು ಎಣಿಕೆ ಮಾಡಲು ಮತ್ತೆ ಆದೇಶ ಮಾಡಿದೆ. 201 ಮತಗಳ ಅಂತರದಿಂದ ಟಿಡಿ ರಾಜೇಗೌಡ ಗೆಲುವು ಸಾಧಿಸಿದ್ದರು.

[pj-news-ticker]