ವಿಜಯಪುರ: ದಿನದಿಂದ ದಿನಕ್ಕೆ ಬಿಸಿಲಿನ ಬೇಗೆ ಹೆಚ್ಚುತ್ತಲೇ ಇದ್ದು, ಜನರು ಹೈರಾಣಾಗುತ್ತಿದ್ದಾರೆ. ತೀವ್ರ ತಾಪಮಾನಕ್ಕೆ 15 ವರ್ಷದ ಬಾಲಕನೊಬ್ಬ ಬಲಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.
ಮೃತ ಬಾಲಕನನ್ನು ಶ್ರೀಶೈಲ ಬಿರಾದಾರ (15) ಎಂದು ಗುರುತಿಸಲಾಗಿದೆ. ಶಾಲಾ ಬೇಸಿಗೆ ರಜೆ ಹಿನ್ನೆಲೆಯಲ್ಲಿ ಶ್ರೀಶೈಲ ಮಧ್ಯಾಹ್ನದ ಉರಿ ಬಿಸಿಲಿನಲ್ಲಿ ಆಟವಾಡಿದ್ದ ಎನ್ನಲಾಗಿದೆ.
ಕೆಲ ಹೊತ್ತಿನಲ್ಲಿಯೇ ಆತ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಬಾಲಕನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
