ಬೆಂಗಳೂರು: ಎನ್ ಡಿಎ ಮಿತ್ರ ಪಕ್ಷವಾಗಿರುವ ಜೆಡಿಎಸ್ ಶುಕ್ರವಾರ ತನ್ನ ಪಾಲಿಗೆ ದೊರಕಿರುವ ಮೂರು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ.
ಮಂಡ್ಯದಿಂದ ನಿರೀಕ್ಷೆಯಂತೆ ಮಾಜಿ ಸಿಎಂ, ಚನ್ನಪಟ್ಟಣದಿಂದ ಶಾಸಕರಾಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಕಣಕ್ಕಿಳಿಯಲಿದ್ದಾರೆ.
ಹಾಸನ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮತ್ತೆ ಕಣಕ್ಕಿಳಿಯಲಿದ್ದಾರೆ.
ಎಸ್ ಸಿ ಮೀಸಲು ಕ್ಷೇತ್ರವಾಗಿರುವ ಕೋಲಾರದಿಂದ ಎಂ.ಮಲ್ಲೇಶ್ ಬಾಬು ಅವರನ್ನು ಪಕ್ಷ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಮಲ್ಲೇಶ್ ಬಾಬು ಅವರು 2018 ಮತ್ತು 2023 ರ ಚುನಾವಣೆಯಲ್ಲಿ ಬಂಗಾರಪೇಟೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯ ಎದುರು ಪರಾಜಿತರಾಗಿದ್ದರು.