Trending

ಶಂಕರಘಟ್ಟದ ರಂಭಾಪುರಿ ಕಾಲೇಜು ವಿದ್ಯಾರ್ಥಿಗಳ ದುರಂತ ಪ್ರಯಾಣ : ಉಡುಪಿ ಅಪಘಾತದಲ್ಲಿ ಇಬ್ಬರು ಬಲಿ

Spread the love

ಉಡುಪಿ: ಪೆಟ್ರೋಲ್‌ ಟ್ಯಾಂಕರ್‌ಗೆ ಪ್ರವಾಸಿ ಬಸ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಸಮೀಪ ನಡೆದಿದೆ.

ತ್ರಾಸಿ ಬೀಚ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಅತಿ ವೇಗದಲ್ಲಿ ಬಂದ ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತೀವ್ರತೆಗೆ ಬಸ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಇದರಿಂದ ಬಸ್‌ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಬಸ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಶಂಕರಘಟ್ಟದ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು ಕರಾವಳಿ ಭಾಗಕ್ಕೆ ಪ್ರವಾಸಕ್ಕಾಗಿ ಬಂದಿದ್ದು, ಮುರುಡೇಶ್ವರದಿಂದ ಉಡುಪಿಯತ್ತ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸುಮಾರು 47 ಮಂದಿ ಪ್ರಯಾಣಿಸುತ್ತಿದ್ದ ಈ ಬಸ್‌ನಲ್ಲಿ ಡಿಕ್ಕಿಯ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ. ಹೆಚ್ಚಿನ ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದಲ್ಲಿ ಅತಿ ವೇಗವೇ ಅಪಘಾತಕ್ಕೆ ಪ್ರಮುಖ ಕಾರಣವಾಗಿರಬಹುದು ಎಂದು ಶಂಕಿಸಲಾಗಿದ್ದು, ಈ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

[pj-news-ticker]