Trending

ನಿಧಿಗಾಗಿ ಹೆತ್ತ ತಾಯಿಯನ್ನೇ ಬಲಿ ಕೊಡಲು ಮುಂದಾದ ಪುತ್ರ

Spread the love

ಚಾಮರಾಜನಗರ: ನಿಧಿ ಆಸೆಗಾಗಿ ಹೆತ್ತ ತಾಯಿಯನ್ನೇ ಪಾಪಿ ಪುತ್ರನೊಬ್ಬ ಬಲಿ ಕೊಡಲು ಮುಂದಾಗಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ.

ಇಂದು ಹುಣ್ಣಿಮೆ ಹಿನ್ನೆಲೆಯಲ್ಲಿ ಬಲಿ ಕೊಟ್ಟರೆ ನಿಧಿ ಸಿಗುತ್ತದೆಂದು ಫ್ಲ್ಯಾನ್‌ ಮಾಡಿದ್ದ ಕೊಂಡಯ್ಯನ ಮಾದಶೆಟ್ಟಿ ಎಂಬಾತ, 80 ವರ್ಷದ ಕಣ್ಣು ಕಾಣದ ಮತ್ತು ಕಿವಿ ಕೇಳದ ತಾಯಿ ಮಾದಮ್ಮಶೆಟ್ಟಿಯನ್ನು ಬಲಿ ಕೊಡಲು ಸಿದ್ಧತೆ ನಡೆಸಿದ್ದ.

ಬೆಳಗ್ಗೆ ತನ್ನ ಮನೆಯಲ್ಲೇ 4 ಅಡಿ ಗುಂಡಿ ತೆಗೆದು ಮಾಟದ ಮಡಕೆ ಇಟ್ಟು ನಿಂಬೆಹಣ್ಣು, ಅರಿಶಿನ ಕುಂಕುಮ ಹಾಗೂ ಕಳಸವಿಟ್ಟು ಪೂಜೆ ಮಾಡಿದ್ದ. ಈ ಬಗ್ಗೆ ಅನುಮಾನಗೊಂಡು ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮನೆಗೆ ಪೊಲೀಸರು ಬರುತ್ತದ್ದಂತೆ ಮಾಟಗಾರ ಎಸ್ಕೇಪ್ ಆಗಿದ್ದು, ಮಾದಶೆಟ್ಟಿಯನ್ನು ಬಂಧಿಸಲಾಗಿದೆ.

ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

[pj-news-ticker]