Trending

ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹ : ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಆದೇಶ

Spread the love

ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ  ಅವರ ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗಿದೆ.

ಭಾರತೀಯ ಸಂವಿಧಾನ ಮತ್ತು ಜನಪ್ರತಿನಿಧಿ ಕಾಯ್ದೆಯ ನಿಯಮಾವಳಿಗಳ ಅನ್ವಯ, ಏಪ್ರಿಲ್ 15ರಿಂದ ಅನ್ವಯವಾಗುವಂತೆ ವಿನಯ್ ಕುಲಕರ್ಣಿ ಅವರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿ ವಿಧಾನಸಭೆ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಭಾರತ ಸಂವಿಧಾನದ ಆರ್ಟಿಕಲ್ 191(1)(ಸಿ) ಹಾಗೂ 1951ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 8ರ ಪ್ರಕಾರ ವಿನಯ್‌ ಕುಲಕರ್ಣಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಶಾಸಕ ಸ್ಥಾನ ತೆರವಾಗಿರುವ ಹಿನ್ನೆಲೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರವು ಶೀಘ್ರದಲ್ಲೇ ಉಪಚುನಾವಣೆ ನಡೆಯುವ ಸಾಧ್ಯತೆಯಿದೆ.

[pj-news-ticker]