ಚೆನ್ನೈ : ಕೊನೆಗೂ ತಮಿಳುನಾಡು ಮುಖ್ಯಮಂತ್ರಿಯಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ, ನಟ ದಳಪತಿ ವಿಜಯ್ ಪ್ರಮಾಣವಚನಕ್ಕೆ ಮುಹೂರ್ತ ನಿಗದಿಯಾಗಿದೆ.
TVK ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ ಅಗತ್ಯವಾದ ಸಂಖ್ಯಾಬಲವನ್ನು ಸಂಪಾದಿಸಿದ ಹಿನ್ನೆಲೆ, ಸರ್ಕಾರ ರಚನೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ನಾಳೆ ಚೆನ್ನೈನ ನೆಹರು ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಧ್ಯಾಹ್ನ 3.15ಕ್ಕೆ ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಜಯ್ ಜೊತೆ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
‘ರಾಷ್ಟ್ರಪತಿ ಆಡಳಿತ ತಪ್ಪಿಸಲು ಬೆಂಬಲ’
ಈ ನಡುವೆ ಟಿವಿಕೆಗೆ ಬೆಂಬಲ ಘೋಷಣೆ ಮಾಡಿರುವ ಬಗ್ಗೆ ಚೆನ್ನೈನಲ್ಲಿ ವಿಸಿಕೆ ಮುಖ್ಯಸ್ಥ ತೋಳ್ ತಿರುಮಾವಳವನ್ ಸ್ಪಷ್ಟನೆ ನೀಡಿದ್ದಾರೆ. ನಮ್ಮಿಂದ ವಿಜಯ್ಗೆ ಅಧಿಕಾರ ತಪ್ಪಿತೆಂಬ ಅಪವಾದ ಬರಬಾರದು. ಅಲ್ಲದೆ ರಾಷ್ಟ್ರಪತಿ ಆಡಳಿತ ತಪ್ಪಿಸಬೇಕಿರುವ ಕಾರಣ ವಿಜಯ್ಗೆ ಭೇಷರತ್ ಬೆಂಬಲ ಘೋಷಿಸಿದ್ದೇವೆ ಎಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
