Trending

ಆಸ್ಪತ್ರೆಗೆ ಹೋದವಳು ಹೆಣವಾಗಿ ವಾಪಸ್ : ಸಣ್ಣ ಶಸ್ತ್ರಚಿಕಿತ್ಸೆ ಜೀವ ಕಸಿತೇ?

Spread the love

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದ ಮಹಿಳೆಯೊಬ್ಬರು ಚಿಕಿತ್ಸೆ ವೇಳೆ ಮೃತಪಟ್ಟ ಘಟನೆ ಆಘಾತ ಮೂಡಿಸಿದೆ.

ಶಿಗ್ಲಿ ಗ್ರಾಮದ 28 ವರ್ಷದ ರೇಣುಕಾ ಮೃತ ಮಹಿಳೆ. ಇಬ್ಬರು ಮಕ್ಕಳ ತಾಯಿಯಾಗಿದ್ದ ಅವರು ಕುಟುಂಬ ಯೋಜನೆಯ ಅಂಗವಾಗಿ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಯಲ್ಲಿ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಶಸ್ತ್ರಚಿಕಿತ್ಸೆಯ ಬಳಿಕ ಅವರ ಆರೋಗ್ಯ ಹದಗೆಟ್ಟಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಶಸ್ತ್ರಚಿಕಿತ್ಸೆ ವೇಳೆ ವೈದ್ಯರ ಅಜಾಗರೂಕತೆಯಿಂದ ಕರುಳಿಗೆ ಹಾನಿಯಾಗಿದ್ದು, ಅದರಿಂದ ತೀವ್ರ ರಕ್ತಸ್ರಾವ ಮತ್ತು ಸೋಂಕು ಉಂಟಾಗಿ ಸಾವಾಗಿದೆ ಎಂದು ಮೃತರ ಪತಿ ಮಂಜುನಾಥ್ ಆರೋಪಿಸಿದ್ದಾರೆ.

ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿರುವ ಕುಟುಂಬಸ್ಥರು ಮತ್ತು ಗ್ರಾಮಸ್ಥರು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುವ ಸಾಧ್ಯತೆ ಇದೆ.

ಸಾಮಾನ್ಯ ಶಸ್ತ್ರಚಿಕಿತ್ಸೆ ಎಂದು ಆಸ್ಪತ್ರೆಗೆ ತೆರಳಿದ ಮಹಿಳೆ ಜೀವ ಕಳೆದುಕೊಂಡ ಘಟನೆ ಕುಟುಂಬದ ದುಃಖ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

[pj-news-ticker]