Trending

ಶಿವಮೊಗ್ಗ : ನೀಟ್ ಪರೀಕ್ಷೆ ರದ್ದು ಖಂಡಿಸಿ ಬೀದಿಗಿಳಿದ ಯುವ ಕಾಂಗ್ರೆಸ್

Spread the love

ಶಿವಮೊಗ್ಗ: ರಾಜಸ್ಥಾನ ಮತ್ತು ಉತ್ತರಾಖಂಡದಲ್ಲಿ ನಡೆದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಸದ ರಾಘವೇಂದ್ರ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿ ಪ್ರತಿಭಟನೆ ನಡೆಸಿದರು.

ವಿನೋಬನಗರ ಪೊಲೀಸ್ ಚೌಕಿ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನೀಟ್ ಪರೀಕ್ಷೆಯಲ್ಲಿ ಉಂಟಾದ ಗೊಂದಲದಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸಂಸದರ ಮನೆ ಕಡೆಗೆ ತೆರಳಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು. ಕೆಲವರು ಬ್ಯಾರಿಕೇಡ್ ಏರಿ ಮುಂದೆ ಸಾಗಲು ಯತ್ನಿಸಿದ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದು ಪೊಲೀಸ್ ಮೈದಾನಕ್ಕೆ ಕರೆದೊಯ್ದರು.

ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

[pj-news-ticker]