ದಾವಣಗೆರೆ: ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 39 ಲಕ್ಷ ಮೌಲ್ಯದ 66 ಕೆಜಿಯ ಬೆಳ್ಳಿ ಆಭರಣಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್ ಬಳಿ ದಾವಣಗೆರೆ ತಹಶೀಲ್ದಾರ್ ಡಾ. ಎಂ.ಬಿ. ಅಶ್ವತ್ ಅವರ ನೇತೃತ್ವದ ತಂಡ ತಪಾಸಣೆ ನಡೆಸುತ್ತಿದ್ದಾಗ ಬಿಎಂಡಬ್ಲ್ಯೂ ಕಾರಿನಲ್ಲಿ ಯಾವುದೇ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ಬೆಳ್ಳಿ ಆಭರಣಗಳು ಪತ್ತೆಯಾಗಿವೆ.
ತಮಗೆ ಸೇರಿದ ಆಭರಣಗಳನ್ನು ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಕಾರಿನಲ್ಲಿದ್ದವರು ಸಮಜಾಯಿಷಿ ನೀಡಿದರು. ಅಧಿಕಾರಿಗಳು ಆಭರಣಗಳ ಜೊತೆಗೆ ಕಾರು ಸಹ ವಶಪಡಿಸಿಕೊಂಡರು