ತೀರ್ಥಹಳ್ಳಿ: ಕೈಮರದ ಬಳಿ ಶನಿವಾರ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಖಾಸಗಿ ಬಸ್ ಪಲ್ಟಿ ಹೊಡೆದಿದೆ. ನಿದ್ರೆ ಮಂಪರಿನಲ್ಲಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಬಸ್ಸಿನಲ್ಲಿ ಹಾಗೂ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಬಳ್ಳಾರಿ ಮೂಲದ ಬಸ್ ಹಾಗೂ ಶಿವಮೊಗ್ಗ ಮೂಲದ ಕಾರು ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.
