Trending

ಗ್ರಾಹಕರಿಗೆ ಶೀಘ್ರ ಮತ್ತೊಂದು ದರ ಏರಿಕೆ ಬರೆ : ಸರಕು ಸಾಗಾಟ ವಾಹನಗಳ ಬಾಡಿಗೆ ದರ ಶೇ.10ರಷ್ಟು ಹೆಚ್ಚಳ ಸಾಧ್ಯತೆ

Spread the love

ಬೆಂಗಳೂರು : ಇಂಧನಗಳ ಬೆಲೆ ಸತತ ಏರಿಕೆಯಿಂದ ಈಗಾಗಲೇ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿರುವ ನಡುವೆ ಶೀಘ್ರವೇ ಅಗತ್ಯ ವಸ್ತುಗಳ ಬೆಲೆಯೂ ಹೆಚ್ಚಾಗುವ ಮುನ್ಸೂಚನೆ ಸಿಕ್ಕಿದೆ.

ಕಳೆದ 10 ದಿನಗಳಲ್ಲಿ ಡೀಸೆಲ್ ದರವು ಒಟ್ಟು 7.81 ರೂ. ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಲಾರಿ ಮಾಲೀಕರು ಹಾಗೂ ಸಾರಿಗೆ ಸಂಸ್ಥೆಗಳು ಸರಕು ಸಾಗಣೆ ದರವನ್ನು ಕನಿಷ್ಠ ಶೇ. 10ರಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ ಆತಂಕ

ಒಂದೊಮ್ಮೆ ಸರಕು ಸಾಗಣೆ ವಾಹನಗಳ ಬಾಡಿಗೆ ದರ ಏರಿಕೆ ಆಗಿದ್ದೇ ಆದಲ್ಲಿ ಇದರ ಪರಿಣಾಮವಾಗಿ ತರಕಾರಿ, ಪ್ಲೈವುಡ್, ಕಬ್ಬಿಣ ಸೇರಿದಂತೆ ವಿವಿಧ ವಸ್ತುಗಳ ಬೆಲೆ ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕರ್ನಾಟಕ ಲಾರಿ ಮಾಲಕರು ಮತ್ತು ಏಜೆಂಟ್​​ ಅಸೋಸಿಯೇಷನ್​​ ಅಧ್ಯಕ್ಷ ಜಿ.ಆರ್. ಶಣ್ಮುಗಪ್ಪ, ಇಂಧನ ದರ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಸರಕು ಸಾಗಣೆ ದರ ಹೆಚ್ಚಿಸುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆಯೇ ಇಲ್ಲ ಎಂದಿದ್ದಾರೆ.

ಡೀಸೆಲ್ ದರ ಏರಿದಾಗ ಸಾರಿಗೆ ವೆಚ್ಚವೂ ಸ್ವಯಂಚಾಲಿತವಾಗಿ ಹೆಚ್ಚುತ್ತದೆ. ಅದನ್ನು ತಪ್ಪಿಸಲು ಸಾಧ್ಯವಿಲ್ಲ” ಎಂದು ಅವರು ತಿಳಿಸಿದ್ದಾರೆ.

[pj-news-ticker]