Trending

ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಸಕ್ರಿಯವಾಗಿರುತ್ತೇನೆ : ಸಿದ್ದರಾಮಯ್ಯ

Spread the love

ಬೆಂಗಳೂರು: ಯಾವುದೇ ಕಾರಣಕ್ಕೂ ತಾವು ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ. ರಾಜ್ಯಸಭೆಗೆ ಹೋಗುವ ಆಫರ್ ಬಂದಿತ್ತು, ವಿನಮ್ರವಾಗಿ ನಿರಾಕರಿಸಿದ್ದು, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಬಳಿಕ ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ ಅವರು, ‘ರಾಜ್ಯಸಭೆಗೆ ಹೋಗುವ ಆಫರ್ ಬಂದಿತ್ತು, ವಿನಮ್ರವಾಗಿ ನಿರಾಕರಿಸಿದ್ದೇನೆ, ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ, ರಾಜ್ಯ ರಾಜಕಾರಣದಲ್ಲಿ ಇರುತ್ತೇನೆ ಜನ ಆಯ್ಕೆ ಮಾಡಿರುವುದು ಐದು ವರ್ಷಕ್ಕೆ ಅಲ್ಲಿವರೆಗೆ ಕರ್ನಾಟಕದ ಜನರ ಪರವಾಗಿ ನನ್ನ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇನೆ’ ಎಂದರು.

ನಾನು ಯಾವತ್ತೂ ಅಧಿಕಾರ, ಹಣದ ಹಿಂದೆ ಹೋದವನಲ್ಲ, ಆಸ್ತಿ ಪಾಸ್ತಿ ಮಾಡಿಕೊಳ್ಳಬೇಕೆಂಬ ಯೋಚನೆ ಮಾಡಿರಲಿಲ್ಲ, 1983ರಲ್ಲಿ ಮೊದಲ ಬಾರಿ ಶಾಸಕನಾದವನು,ರಾಜಕಾರಣಕ್ಕೆ ಬಂದು ಸುಮಾರು 50 ವರ್ಷ ಆಗ್ತಾ ಬಂದಿದೆ, ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಯಾವತ್ತೂ ಕೂಡ ನನ್ನ ಮೌಲ್ಯ, ಸಿದ್ಧಾಂತದಲ್ಲಿ ರಾಜೀ ಆಗಿಲ್ಲ,

ಕಟ್ಟ ಕಡೆಯ ವ್ಯಕ್ತಿಗೂ ಅನ್ನ, ವಸತಿ, ಶಿಕ್ಷಣ ಒದಗಿಸಬೇಕೆಂಬ ನಂಬಿಕೆ, ಸಮಾಜದಲ್ಲಿರುವ ಎಲ್ಲಾ ಬಡವರಿಗಾಗಿ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕುವೆಂಪು ಹೇಳಿದಂತೆ ಶಾಂತಿಯ ತೋಟ ಆಗಬೇಕು

ಇಡೀ ಸಮಾಜ ಕುವೆಂಪು ಹೇಳಿದಂತೆ ಶಾಂತಿಯ ತೋಟ ಆಗಬೇಕು ಅಂತ ಬಯಸಿದವನು. ಸಮಾಮತೆಯ ಸಮಾಜ ನಿರ್ಮಾಣ ಆಗಬೇಕು. ಸಮಾನತೆಯ ಅವಕಾಧ ಎಲ್ಲರಿಗೂ ಸಿಗಬೇಕು. ಸಮಾನ ಅವಕಾಶ ಇಲ್ಲದಿರುವುದರಿಂದಲೇ ನಮ್ಮ ಸಮಾಜದಲ್ಲಿ ಅಸಮಾನತೆ ನೋಡುತ್ತಿದ್ದೇವೆ. ಈ ಅಸಮಾನತೆ ತೊಲಗಬೇಕಾದರೆ ಎಲ್ಲರಿಗೂ ಸಮಾನತೆಯ ಅವಕಾಶ ಸಿಗಲೇಬೇಕು ಎಂದರು.

[pj-news-ticker]