Trending

ಮನೆಯಲ್ಲಿ ಎಸಿ ಸ್ಫೋಟ : ಮಾಜಿ ಐಎಎಸ್ ಅಧಿಕಾರಿ ಸಾವು, ಮಗನಿಗೆ ಗಂಭೀರ ಗಾಯ

Spread the love

ನವದೆಹಲಿ: ಮನೆಯಲ್ಲಿ ಎಸಿ ಸ್ಪೋಟಗೊಂಡು ಮಾಜಿ ಐಎಎಸ್ ಅಧಿಕಾರಿ ಮತ್ತು ಭಾರತ ಸ್ಪರ್ಧಾ ಆಯೋಗದ (CCI) ಮೊದಲ ಅಧ್ಯಕ್ಷ 80 ವರ್ಷದ ಧನೇಂದ್ರ ಕುಮಾರ್ ಅವರು ಸಾವನ್ನಪ್ಪಿದ್ದಾರೆ.

ಈ ಘಟನೆ ಗುರುವಾರ ರಾತ್ರಿ 11:18ರ ಸುಮಾರಿಗೆ ನಡೆದಿದೆ. ಅವರ ಮಗ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ ಧನೇಂದ್ರ ಕುಮಾರ್, ಅವರ ಮಗ ಸೇರಿದಂತೆ ಒಟ್ಟು ಐವರು ಇದ್ದರು. ಉಳಿದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯ ಪ್ರಮುಖ ಸ್ಥಳವಾದ ದೆಹಲಿಯ ಹೌಜ್ ಖಾಸ್‌ನಲ್ಲಿರುವ ಧನೇಂದ್ರ ಕುಮಾರ್ ಅವರ ಮನೆಯಲ್ಲಿ ಎಸಿ ಸ್ಫೋಟ ಉಂಟಾಗಿದೆ. ಸ್ಪೋಟದ ಬಳಿಕ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತ್ತು. ಧನೇಂದ್ರ ಕುಮಾರ್ ಅವರು ಹೊಗೆಯಿಂದ ಉಸಿರಾಟದ ತೊಂದರೆ ಅನುಭವಿಸಿ ಸಾವನ್ನಪ್ಪಿದ್ದಾರೆ. ಅವರ ಮಗ ಗಾಯಗೊಂಡಿದ್ದರು.

ಘಟನೆಯ ಸಂದರ್ಭದಲ್ಲಿ ಕುಟುಂಬ ಸದಸ್ಯರು, ಮನೆಕೆಲಸಗಾರರು ಸೇರಿದಂತೆ ಒಟ್ಟು ಐದು ಮಂದಿ ಮನೆಯಲ್ಲಿದ್ದರು. ಮಾಹಿತಿ ತಿಳಿದ ತಕ್ಷಣವೇ ಪೊಲೀಸ್ ತಂಡ, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ ಮನೆಯೊಳಗೆ ಇದ್ದ ಸದಸ್ಯರನ್ನು ರಕ್ಷಿಸಲು ಮುಂದಾದರು.

ಧನೇಂದ್ರ ಕುಮಾರ್ ಮತ್ತು ಅವರ ಮಗನನ್ನು ಹತ್ತಿರದ ಆಸ್ಪತ್ರೆಗೆ ತಕ್ಷಣವೇ ದಾಖಲಿಸಲಾಗಿದ್ದು, ಧನೇಂದ್ರ ಕುಮಾರ್ ಅವರು ಮೊದಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಅವರ ಮಗ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಯಲ್ಲಿ ಅಳವಡಿಸಲಾದ ಹವಾನಿಯಂತ್ರಣ ವ್ಯವಸ್ಥೆಯ ಒಳಾಂಗಣದಲ್ಲಿ ಸ್ಫೋಟ ಉಂಟಾಗಿ ಹೊಗೆ, ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಧನೇಂದ್ರ ಕುಮಾರ್ ಅವರ ಮನೆ ಸಂಪೂರ್ಣವಾಗಿ ಸುಟ್ಟುಹೋಗಿದೆ. ಇದರಲ್ಲಿ ಯಾವುದೇ ಅನುಮಾನಸ್ಪದ ಸಂಗತಿ ಕಂಡು ಬಂದಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಮತ್ತು ಅಪರಾಧ ತಂಡಗಳು ತಿಳಿಸಿವೆ.

[pj-news-ticker]